ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆಯು ಹತ್ಯೆಗೈದಿದ್ದಾರೆ .
ಈ ಕುರಿತು ಸೇನಾಧಿಕಾರಿಗಳು ಮಾಹಿತಿ ನೀಡಿದ್ದು, ಮುಂಜಾನೆ, ಪೂಂಚ್ ಸೆಕ್ಟರ್‌ನಲ್ಲಿ ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಸೇನೆ, ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ (ಎಲ್‌ಒಸಿ) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಎಲ್‌ಒಸಿಯಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿ ಪೂಂಚ್ ಸೆಕ್ಟರ್‌ನಲ್ಲಿ ಎಲ್‌ಒಸಿ ಉದ್ದಕ್ಕೂ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.