ಅಧ್ಯಕ್ಷರ ವಿರುದ್ಧದ ಲೈಂಗಿಕ ಆರೋಪ ತಿರಸ್ಕರಿಸಿದ ಭಾರತೀಯ ಕುಸ್ತಿ ಫೆಡರೇಶನ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕುಸ್ತಿ ಫೆಡರೇಶನ್(WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪವನ್ನು ಡಬ್ಲ್ಯುಎಫ್ಐ ತಿರಸ್ಕರಿಸಿದೆ.
ಬ್ರಿಜ್ ಸೇರಿದಂತೆ ಯಾರಿಂದಲೂ ವೈಯಕ್ತಿಕವಾಗಿ WFI ನಲ್ಲಿ ಅನಿಯಂತ್ರಿತ ಅಥವಾ ದುರುಪಯೋಗಕ್ಕೆ ಯಾವುದೇ ಅವಕಾಶವಿಲ್ಲ. ವ್ಯಕ್ತಿಯ ಮಾನಹಾನಿ ಮಾಡುವ ಉದ್ದೇಶದಿಂದ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ್ದಾರೆ. ಇದರ ಹಿಂದೆ ಕ್ರೀಡಾಪಟುಗಳ ಕೆಲವು ವೈಯಕ್ತಿಕ ಮತ್ತು ಗುಪ್ತ ಅಜೆಂಡಾ ಇದೆ ಎಂದು WFI ಕ್ರೀಡಾ ಸಚಿವಾಲಯಕ್ಕೆ ಮಾಹಿತಿ ನೀಡಿದೆ.
ಒಲಿಂಪಿಕ್ ಪದಕ ವಿಜೇತರಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಸೇರಿದಂತೆ ಭಾರತದ ಕುಸ್ತಿಪಟುಗಳು ಜಂತರ್ ಮಂತರ್ನಲ್ಲಿ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪದ ಮೇಲೆ ಧರಣಿ ನಡೆಸುತ್ತಿದ್ದರು.
ಸದ್ಯ ಕುಂದುಕೊರತೆಗಳನ್ನು ಪರಿಹರಿಸುವ ಭರವಸೆಯನ್ನು ಪಡೆದ ನಂತರ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!