Wednesday, January 14, 2026
Wednesday, January 14, 2026
spot_img

ಏನೂ ಅರಿಯದ ಕಂದಮ್ಮನೇ ಅಫೇರ್‌ಗೆ ವಿಲನ್‌! ಮಗುವನ್ನೇ ಮಾರಿದ ಮಹಾತಾಯಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಕ್ರಮ ಸಂಬಂಧಕ್ಕೆ ಮಗು ಅಡ್ಡಿಯಾಗುತ್ತದೆ ಎಂದು ಏನೂ ಅರಿಯದ ಕಂದಮ್ಮನನ್ನೇ ತಾಯಿ ಮಾರಿದ್ದಾಳೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ನಗರದಲ್ಲಿ ಘಟನೆ ನಡೆದಿದ್ದು, ತಾಯಿ ಐವತ್ತು ಸಾವಿರ ರೂಪಾಯಿಗೆ ಮಗುವನ್ನು ಮಾರಿದ್ದಾಳೆ ಎಂದು ತಿಳಿದುಬಂದಿದೆ.

ಕೆಲದಿನಗಳಿಂದ ಈ ಮಗು ಕಾಣದ ಹಿನ್ನೆಲೆಯಲ್ಲಿ ಅಲರ್ಟ್ ಆದ ಸ್ಥಳೀಯರು ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದರು. ಹೀಗಾಗಿ ಚಿತ್ರದುರ್ಗ ಜಿಲ್ಲಾ ಬಾಲಭವನ ಅಧಿಕಾರಿ ಮಂಜುನಾಥ್ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ ವೇಳೆ ಪ್ರಕರಣ ಬಯಲಾಗಿದೆ. ಡಿ.23ರಂದು ಹುಳಿಯಾರು ರಸ್ತೆಯ ನಿವಾಸಿ ಐಶ್ವರ್ಯ ವಿರುದ್ಧ ಹಿರಿಯೂರು ನಗರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಳಿಕ ಪ್ರಕರಣದ ಬೆನ್ನತ್ತಿದ ಪೊಲೀಸರು, ಈ ಘಟನೆಯ ಅಸಲಿ ಸತ್ಯ ಕೇಳಿ ಬೆರಗಾಗಿದ್ದಾರೆ. ಹೂವಿನಹೊಳೆ ಗ್ರಾಮದ ಚಂದ್ರಪ್ಪ ಜೊತೆ ಐಶ್ವರ್ಯ ಅಕ್ರಮ ಸಂಬಂಧ ಹೊಂದಿದ್ದಳು. ಅವರ ಅಕ್ರಮ ಆಟಕ್ಕಾಗಿ ಇಬ್ಬರೂ ಸೇರಿ ಕೊಪ್ಪಳ ಮೂಲದವರಿಗೆ ಮಗುವನ್ನು 50,000 ರೂ.ಗೆ ಮಾರಾಟ ಮಾಡಿದ್ದಾರೆಂದು ತಿಳಿದುಬಂದಿದೆ.

Most Read

error: Content is protected !!