WEATHER | ಕಡಿಮೆಯಾಯ್ತು ಫೆಂಗಲ್‌ ಅಬ್ಬರ, ಆದರೂ ರಾಜ್ಯದಲ್ಲಿ ನಾಲ್ಕು ದಿನ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಫೆಂಗಲ್ ಚಂಡಮಾರುತದ ಅಬ್ಬರ ಕೊಂಚ ತಗ್ಗಿದೆ. ಆದರೂ ಸಹ ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿ.12ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!