ಶೈಕ್ಷಣಿಕ ಸಬಲೀಕರಣಕ್ಕೆ ವೀರಶೈವ ಮಠಗಳ ಅಮೂಲ್ಯ ಕೊಡುಗೆ: ಉಜ್ಜಯಿನಿ ಜಗದ್ಗುರು

ಹೊಸದಿಗಂತ ವರದಿ, ಕಲಬುರಗಿ:

ಉಜ್ಜಯಿನಿ ಮಹಾಸಂಸ್ಥಾನದ ಪೀಠಾಧಿಪತಿ ಪೂಜ್ಯ ಶ್ರೀ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು, ಸಮಾಜದಲ್ಲಿರುವ ಬಡವರ, ನಿರ್ಲಕ್ಷಿತ ವರ್ಗದವರ ಹಾಗೂ ಪ್ರದೇಶದ ಜನರ ವಂಚಿತ ವಿಭಾಗಗಳ ಶೈಕ್ಷಣಿಕ ಸಬಲೀಕರಣಕ್ಕೆ ವೀರಶೈವ ಮಠಗಳು ಅಮೂಲ್ಯ ಕೊಡುಗೆ ನೀಡಿವೆ ಹಾಗೂ ಕಲಬುರಗಿಯ ಶರಣಬಸವೇಶ್ವರ ಸಂಸ್ಥಾನವು ಮಹಿಳಾ ಮತ್ತು ಶೈಕ್ಷಣಿಕ ಸಬಲೀಕರಣದಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಶ್ಲಾಘಿಸಿದರು.

ಕಲಬುರಗಿ ನಗರದ ಶರಣಬಸವೇಶ್ವರ ಸಂಸ್ಥಾನಕ್ಕೆ ಭೇಟಿ ನೀಡಿ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಯಾಗಿ ಪಟ್ಟಾಭಿμÉೀಕಗೊಂಡಿರುವ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರಿಗೆ ಆಶೀರ್ವಾದ ನೀಡಿ, ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಪೂಜ್ಯ ಡಾ.ಶರಣಬಸವಪ್ಪ ಅಪ್ಪಾಜಿಯವರನ್ನು ಭೇಟಿ ಮಾಡಿದ ಸ್ವಾಮೀಜಿಯವರು, ಶರಣಬಸವೇಶ್ವರ ಸಂಸ್ಥಾನ ಹಾಗೂ ವಿಶೇಷವಾಗಿ ಸಂಸ್ಥಾನದ 8ನೇ ಪೀಠಾಧಿಪತಿ ಡಾ.ಅಪ್ಪಾಜಿ ಅವರು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಕೊಡುಗೆ ಮತ್ತು ಮಹಿಳೆಯರನ್ನು ಶೈಕ್ಷಣಿಕವಾಗಿ ಸಬಲೀಕರಣಗೊಳಿಸುವುದಕ್ಕಾಗಿ ಪಟ್ಟ ಶ್ರಮಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.

ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವ್ವಾಜಿ ಅವರು ಭೇಟಿ ವೇಳೆ ಜಗದ್ಗುರುಗಳ ಪಾದಪೂಜೆ ಹಾಗೂ ಇತರೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೆರಿಸಿದರು.

ನಂತರ ಸ್ವಾಮೀಜಿಗಳು ಮಾತನಾಡಿ, ಶೈಕ್ಷಣಿಕವಾಗಿ ಹಿಂದುಳಿದಿದ್ದ ಕಲಬುರಗಿ ಕ್ಷೇತ್ರವನ್ನು ಡಾ.ಅಪ್ಪಾಜಿ ಏಕಾಂಗಿಯಾಗಿ ಪರಿವರ್ತಿಸಿದ್ದಾರೆ. ಶೈಕ್ಷಣಿಕ ಸಂಸ್ಥೆಗಳ ಸರಪಳಿಯನ್ನು ಪ್ರಾರಂಭಿಸುವ ಮೂಲಕ ಮತ್ತು ಕಲಬುರಗಿ ನಗರದಲ್ಲಿ ಮೊಟ್ಟಮೊದಲ ಖಾಸಗಿ ವಿಶ್ವವಿದ್ಯಾಲಯವಾದ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸಿದ್ದಾರೆ. ರಾಜ್ಯದಲ್ಲಿ “ಮಹಿಳೆಯರಿಗಾಗಿ ಎರಡನೇ ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ವಿಶೇಷ ಕಾಲೇಜುಗಳನ್ನು ಆರಂಭಿಸಿ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಮೂಲಕ ಮಹಿಳೆಯರ ಶೈಕ್ಷಣಿಕ ಸಬಲೀಕರಣದಲ್ಲಿ ಡಾ.ಅಪ್ಪಾಜಿಯವರ ಕೊಡುಗೆ ಶ್ಲಾಘನೀಯ” ಎಂದರು.

ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿಯಾಗಿ ಪಟ್ಟಾಭಿμÉೀಕಗೊಂಡಿರುವ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿ ಅವರು ತಮ್ಮ ಪೂರ್ವಜರು ಮಾಡಿರುವ ಎಲ್ಲ ಉತ್ತಮ ಕಾರ್ಯಗಳನ್ನು ಮುಂದುವರಿಸಿ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಹೊಸ ಕ್ರಮಗಳನ್ನು ಕೈಗೊಂಡು ದಾಸೋಹ ಸಂಸ್ಕøತಿಯನ್ನು ಮುಂದುವರಿಸಿಕೊಂಡು ಹೋಗುವಲ್ಲಿ ಹಿರಿಯರ ಹಾದಿಯಲ್ಲಿ ಸಾಗಬೇಕೆಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!