ಫೆಬ್ರವರಿ 12-13ರಂದು ಬೆಂಗಳೂರಿನಲ್ಲಿ ನಡೆಯಲಿದೆ ಐಪಿಎಲ್ ಹರಾಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ 2022 ಐಪಿಎಲ್ ಗೆ ಲಕ್ನೋ ಮತ್ತು ಅಹಮದಾಬಾದ್ ಫ್ರಾಂಚೈಸಿಗಳಿಗೆ ಬಿಸಿಸಿಐ ಔಪಚಾರಿಕ ಅನುಮತಿ ನೀಡಿದೆ. ಈ ಮೂಲಕ ಎರಡು ತಂಡಗಳಿಗೆ ತಮ್ಮ ಡ್ರಾಫ್ಟ್ ಪಿಕ್ ಗಳನ್ನು ಅಂತಿಮಗೊಳಿಸಲು ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ.
ಇನ್ನು ಫೆಬ್ರವರಿ 12 ಮತ್ತು ಫೆ. 13ರಂದು ಬೆಂಗಳೂರಿನಲ್ಲಿ ಐಪಿಎಲ್ ಹರಾಜು ನಡೆಸಲು ಮುಹೂರ್ತ ನಿಗದಿ ಪಡಿಸಲಾಗಿದೆ.
ಈ ಕುರಿತುಮಾಹಿತಿ ನೀಡಿದ ಐಪಿಎಲ್ ಅಧ್ಯಕ್ಷ ಬ್ರಿಜೇಶ್ ಪಟೇಲ್ ಅವರು, ಈ ಬಾರಿ ಐಪಿಎಲ್ ಹರಾಜು ಪ್ರಕ್ರಿಯೆಯನ್ನು ಬೆಂಗಳೂರಿನಲ್ಲಿ ಫೆಬ್ರವರಿ 12, 2022 ಮತ್ತು ಫೆಬ್ರವರಿ 13, 2022ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಈ ಬಾರಿಯ ಐಪಿಎಲ್ ಪಂದ್ಯಾವಳಿಯಲ್ಲಿ ಹೊಸದಾಗಿ ಲಕ್ನೋ ಮತ್ತು ಅಹಮದಾಬಾದ್ ಫ್ರಾಂಚೈಸಿಗಳಿಗೆ ಔಪಚಾರಿಕವಾಗಿ ಅನುಮತಿಸಲಾಗಿದೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!