ರಾಜ್ಯದಲ್ಲಿ ಮತ್ತೆ ಮುನ್ನೆಲೆಗೆ ಬಂದ ಲಿಂಗಾಯತ ಸಿಎಂ ವಿಚಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಚುನಾವಣೆ ವೇಳೆ ಸುದ್ದಿಯಾಗಿದ್ದ ಲಿಂಗಾಯತ ವಿಚಾರ ಮತ್ತೆ ಮುನ್ನಲೆಗೆ ಬಂದಿದ್ದು, ಇದೀಗ ಬಿಜೆಪಿ ಕಾಂಗ್ರೆಸ್​ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಕಳೆದ ಮೂವತ್ತೈದು ವರ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡದಿರುವುದು ಜಗತ್ತಿಗೆ ಗೊತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತವಿದೆ. ಲಿಂಗಾಯತ ಸಮುದಾಯದ ಮೇಲೆ ನಿಜವಾದ ಪ್ರೀತಿ ಇದ್ದರೆ ಲಿಂಗಾಯತ ಸಮುದಾಯದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಿರಿ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಗೆ ನೇರ ಸವಾಲು ಹಾಕಿದ್ದಾರೆ.

ಬಿಜೆಪಿ ರಾಜ್ಯದಲ್ಲಿ ಕಡಿಮೆ ಅವಧಿಯಲ್ಲಿ ಅಧಿಕಾರ ನಡೆಸಿದ್ದರೂ, ಲಿಂಗಾಯತ ಸಮುದಾಯವನ್ನು ಯಾವಾಗಲೂ ಗೌರವದಿಂದಲೇ ನೋಡಿಕೊಂಡು ಬಂದಿದೆ. ನನ್ನ ಸಮೇತವಾಗಿ ನಾಲ್ವರು ಮುಖ್ಯಮಂತ್ರಿಗಳಲ್ಲಿ ಮೂವರು ಲಿಂಗಾಯತ ಸಮುದಾಯಕ್ಕೆ ಸೇರಿದವರನ್ನು ಮುಖ್ಯಮಂತ್ರಿ ಮಾಡಿರುವುದೇ ಇದಕ್ಕೆ ಸಾಕ್ಷಿ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಮೂಲಕ ನಮ್ಮ ಪಕ್ಷದ ವಿಚಾರದಲ್ಲಿ ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!