ಹೊಸದಿಗಂತ ಡಿಜಿಟಲ್ ಡೆಸ್ಕ್:
ʻಕಾಮಿಡಿ ಕಿಲಾಡಿʼ ಸೀಸನ್ 3 ವಿನ್ನರ್, ಕನ್ನಡದ ಕಿರುತೆರೆಯ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ ಲೋಕದಲ್ಲಿ ಅಪಾರ ಖ್ಯಾತಿ ಗಳಿಸಿದ್ದ 34 ವರ್ಷದ ರಾಕೇಶ್ ಪೂಜಾರಿ ಸೋಮವಾರ ಬೆಳಗ್ಗಿನ ಜಾವ 3:30ರ ವೇಳೆಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ರಾತ್ರಿ ಅವರು ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ನಿನ್ನೆಯಷ್ಟೇ ಕಾಂತಾರ ಪ್ರಿಕ್ವೆಲ್ ಶೂಟಿಂಗ್‌ನಲ್ಲಿ ಭಾಗಿಯಾಗಿದ್ದ ರಾಕೇಶ್, ಖಾಸಗಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಸ್ನೇಹಿತರ ಜೊತೆ ಇದ್ದಾಗ ಹೃದಯಘಾತ ಸಂಭವಿಸಿದೆ. ಲೋ ಬಿಪಿಯಿಂದ ಸಹ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಮೂಲಗಳಿಂದ ತಿಳಿದುಬಂದಿದೆ.
ಸುಸ್ತು ಅಂತ ಸ್ನೇಹಿತರ ಬಳಿ ಹೇಳಿದಾಗ ತಕ್ಷಣ ರಾಕೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಯಿತಾದರೂ ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸಧೇ ನಿಧನ ಹೊಂದಿದರು ಎಂದು ತಿಳಿದುಬಂದಿದೆ.