ಹೊಸದಿಗಂತ ವರದಿ, ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಘಟಕದ ವ್ಯಾಪ್ತಿಯಲ್ಲಿ ಶ್ರೀ ರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಯವರು ಜಾರಿಗೊಳಿಸಿರುವ ನಿರ್ಬಂಧ ಗುರುವಾರ ಸಂಜೆ 4 ಗಂಟೆಯಿಂದ ಮುಂದಿನ ಆದೇಶದ ವರೆಗೆ ಜಾರಿಯಲ್ಲಿರುತ್ತದೆ ಎಂದು ತಿಳಿಸಲಾಗಿದೆ.
ಪ್ರಮೋದ್ ಮುತಾಲಿಕ್ ಗುರುವಾರ ಸಂಜೆ ಬೆಳ್ಳಾರೆಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಎಸ್ಪಿ ಹೃಷಿಕೇಶ್ ಸೊನಾವಣೆ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದು ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಕೋರಿದ್ದರು. ಹಿಂದೆ ಅವರ ಭೇಟಿಯಿಂದ ಕೋಮು ಸೌಹಾರ್ದತೆಗೆ ಧಕ್ಕೆ ಆಗಿತ್ತು ಎಂದು ಎಸ್ಪಿ ಪತ್ರದಲ್ಲಿ ತಿಳಿಸಿದ್ದರು.