ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದ್ದು, ಕಾಂಗ್ರೆಸ್ ಈ ಬಗ್ಗೆ ಟ್ವೀಟ್ ಮಾಡಿದೆ.
ಮಾಡಿದ್ದುಣ್ಣೋ ಮಹರಾಯ ಎನ್ನುವ ಪೋಸ್ಟ್ ಒಂದನ್ನು ಮಾಡಿದ್ದು, ಈ ಜನ್ಮದಲ್ಲಿ ಮಾಡಿದ ಕರ್ಮದ ಕೆಲಸಕ್ಕೆ ಈ ಜನ್ಮದಲ್ಲೇ ಉತ್ತರ ಸಿಕ್ಕಿದೆ ಎನ್ನುವ ಪೋಸ್ಟ್ ಅಪ್‌ಲೋಡ್ ಮಾಡಲಾಗಿದೆ.
ಅಪರಾಧಿ ಪ್ರಜ್ವಲ್ ರೇವಣ್ಣಗೆ ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೋಗಳು ವೈರಲ್ ಆಗಿದ್ದವು. ಈ ವಿಡಿಯೋ ಸಂಬಂಧ ತನಿಖೆಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಎಸ್‌ಐಟಿ ರಚಿಸಿ ತನಿಖೆಗೆ ಆದೇಶಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಿದೆ.