ಬ್ರಿಟನ್ ಸಂಸತ್ತಿನಲ್ಲಿ ‘ದಿ ಕಾಶ್ಮೀರ್ ಫೈಲ್ಸ್’: ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಸಿಕ್ಕಿದೆ ಆಹ್ವಾನ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ಇಡೀ ದೇಶದಲ್ಲಿ ಹೊಸ ಸಂಚಲನ ಮೂಡಿಸಿದ ಸಿನಿಮಾ. ಈ ಸಿನಿಮಾ ಕೇವಲ 18 ದಿನಗಳಲ್ಲಿ 231 ಕೋಟಿ ಗಳಿಸಿದೆ. ಇಡೀ ದೇಶದಲ್ಲಿ ಬಹುತೇಕ ಎಲ್ಲ ಕಡೆಗಳಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಇದೀಗ ಕೇವಲ ಭಾರತದಲ್ಲಿ ಮಾತ್ರವಲ್ಲದೇ ಹೊರ ದೇಶದಲ್ಲೂ ಗಮನಸೆಳೆಯುತ್ತಿದೆ. ಈ ಕುರಿತು ನಿರ್ದೇಶಕ ವಿವೇಕ್ ಅವರು ಬೇರೆ ದೇಶವೊಂದರಲ್ಲಿಯೂ ಸಿನಿಮಾದ ಸಂದೇಶವನ್ನು ತಿಳಿಸಲು ಹೊರಟಿದ್ದಾರೆ .
ಹೌದು , ಬ್ರಿಟನ್ ಸಂಸತ್ತಿನಿಂದ ವಿವೇಕ್ ಅಗ್ನಿಹೋತ್ರಿ ಅವರಿಗೆ ವಿಶೇಷ ಆಹ್ವಾನ ಬಂದಿದ್ದು, ಈ ಕುರಿತು ಅವರೇ ಮಾಹಿತಿ ನೀಡಿದ್ದಾರೆ.
‘ ಪತ್ನಿ ಪಲ್ಲವಿ ಮತ್ತು ನನ್ನನ್ನು ಬ್ರಿಟನ್ ಸಂಸತ್​ನವರು ಆಹ್ವಾನಿಸಿದ್ದಾರೆ . ಮುಂದಿನ ತಿಂಗಳು ನಾವು ಅಲ್ಲಿಗೆ ಹೋಗುತ್ತೇವೆ . ಕಾಶ್ಮೀರಿ ಪಂಡಿತರ ನರಮೇಧದ ಸಂದೇಶವನ್ನು ಪ್ರಪಂಚದ ಮೂಲೆ ಮೂಲೆಗೆ ತಲುಪಿಸುವ ಉದ್ದೇಶದಿಂದ ಕಾಶ್ಮೀರಿ ಫೈಲ್ಸ್ ಸಿನಿಮಾ ಮಾಡಲಾಗಿದೆ . ಬ್ರಿಟನ್ ಸಂಸತ್ತಿಗೆ ಹೋಗುತ್ತಿರುವುದಕ್ಕೆ ನನಗೆ ಖುಷಿಯಿದೆ ‘, ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!