ಹೊಸದಿಗಂತ ಡಿಜಿಟಲ್ ಡೆಸ್ಕ್
1990 ರ ದಶಕದಲ್ಲಿ ಕಾಶ್ಮೀರ ಕಣಿವೆಯಲ್ಲಿ ನಡೆದ ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ವಲಸೆಯ ನೈಜ ಆಧರಿತ ʼದಿ ಕಾಶ್ಮೀರಿ ಫೈಲ್ಸ್ʼ ಭಾರತೀಯ ಚಿತ್ರರಂಗದಲ್ಲಿ ಹೊಸ ಸೆನ್ಸೇಷನ್ ಹುಟ್ಟುಹಾಕಿದ ಚಿತ್ರ. ಬಿಗ್ ಬಜೆಟ್, ಅದ್ಧೂರಿ ಹಾಡಿಗಳು, ಸೂಪರ್ ಸ್ಟಾರ್ ಗಳ ಹಂಗಿಲ್ಲದೆ, ತನ್ನ ಕಥಾವಸ್ತುವಿನಿಂದಲೇ ಪ್ರೇಕ್ಷಕರನ್ನು ಚಿತ್ರಮಂದಿರದತ್ತ ಸೆಳೆದ ಚಿತ್ರವಿದು.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಚಿತ್ರ ಗಲ್ಲಾಪೆಟ್ಟಿಗೆಯಲ್ಲೂ ಪ್ರಚಂಡ ಯಶಸ್ಸು ಸಾಧಿಸಿತ್ತು. ಇತ್ತೀಚೆಗೆ ಒಟಿಟಿ ಯಲ್ಲಿ ಬಿಡುಗಡೆಯಾಗಿದ್ದ ಕಾಶ್ಮೀರಿ ಫೈಲ್ಸ್ ಅಲ್ಲಿಯೂ ಸಹ ಸಹ ಉತ್ತಮ ಪ್ರತಿಕ್ರಿಯೆ ಪಡೆದಿತ್ತು. ಇದೀಗ ಕನ್ನಡ ಕಿರುತೆರೆಯಲ್ಲಿ ʼಕಾಶ್ಮೀರಿ ಫೈಲ್ಸ್ʼ ಪ್ರಸಾರ ಕಾಣಲು ಸಿದ್ಧತೆಗಳು ನಡೆದಿದೆ.
ಆಗಸ್ಟ್ 15ರಂದು ಸ್ವಾತಂತ್ರೋತ್ಸವದ ದಿನದಂದು ಜೀ ಕನ್ನಡ ವಾಹಿನಿಯಲ್ಲಿ ʼದಿ ಕಾಶ್ಮೀರಿ ಫೈಲ್ಸ್ʼ ಪ್ರಸಾರ ಕಾಣಲಿದೆ. ಮಧ್ಯಾಹ್ನ 3 ಗಂಟೆಗೆ ಚಿತ್ರ ಸ್ಮಾಲ್ ಸ್ಕ್ರೀನ್ ನಲ್ಲಿ ತೆರೆ ಮೇಲೆ ಬರಲಿದೆ.
ಚಿತ್ರದಲ್ಲಿ ಅನುಪಮ್ ಖೇರ್, ಪಲ್ಲವಿ ಜೋಶಿ, ಮಿಥುನ್ ಚಕ್ರವರ್ತಿ, ಪ್ರಕಾಶ್ ಬೆಳವಾಡಿ ಮೊದಲಾದ ಖ್ಯಾತನಾಮರ ತಾರಾಂಗಣವಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ