‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಿದ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯ ನಾಥ್

ಹೊಸ ದೀಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಶುಕ್ರವಾರ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜೊತೆ ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ಕುರಿತು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ‘ನಾನು ನನ್ನ ಸಚಿವ ಸಹೋದ್ಯೋಗಿಗಳ ಜೊತೆ ಸಿನಿಮಾ ನೋಡಿದೆ. ದಿ ಕೇರಳ ಸ್ಟೋರಿ ಚಿತ್ರ ತಂಡಕ್ಕೆ ಅಭಿನಂದನೆಗಳು’ ಎಂದು ಪೋಸ್ಟ್ ಮಾಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ದರಿಂದ ಇಡೀ ಟೀಮ್ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ, ಧನ್ಯವಾದ ತಿಳಿಸಿತ್ತು. ಇದೇ ಸಂದರ್ಭದಲ್ಲಿ ಚಿತ್ರತಂಡಕ್ಕೆ ಗಿಫ್ಟ್ ನೀಡಿ ಅಭಿನಂದಿಸಿದ್ದ ಸಿಎಂ, ಸಿನಿಮಾ ವೀಕ್ಷಿಸುವುದಾಗಿ ತಿಳಿಸಿದ್ದರು. ಮಾತುಕೊಟ್ಟಂತೆ ಇಂದು ಸಿನಿಮಾ ವೀಕ್ಷಣೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!