ಬಂಗಾಳದಲ್ಲಿ ದಿ ಕೇರಳ ಸ್ಟೋರಿ ಬ್ಯಾನ್: ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಚಿತ್ರತಂಡ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ದೇಶದಲ್ಲಿ ಸದ್ಯ ಸದ್ದು ಮಾಡುತ್ತಿರುವ ದಿ ಕೇರಳ ಸ್ಟೋರಿ ಸಿನಿಮಾವನ್ನುಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿದ್ದು, ಈ ನಿರ್ಧಾರವನ್ನು ಪ್ರಶ್ನಿಸಿ ಚಿತ್ರತಂಡ ಸುಪ್ರೀಂಕೊರ್ಟ್​ ಮೆಟ್ಟಿಲೇರಿದೆ.

ಜೊತೆಗೆತಮಿಳುನಾಡು ಚಿತ್ರಮಂದಿರಗಳಲ್ಲಿ ಭದ್ರತೆ ಒದಗಿಸುವಂತೆ ಸರ್ಕಾರಕ್ಕೆ ಸೂಚಿಸುವಂತೆಯೂ ಅರ್ಜಿಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

ಸೋಮವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದ್ವೇಷ ಮತ್ತು ಹಿಂಸಾಚಾರವನ್ನು ತಡೆಗಟ್ಟುವ ಉದ್ದೇಶದಿಂದ ಚಲನಚಿತ್ರ ‘ದಿ ಕೇರಳ ಸ್ಟೋರಿ’ ಪ್ರದರ್ಶನವನ್ನು ತಕ್ಷಣವೇ ನಿಷೇಧಿಸುವಂತೆ ಆದೇಶಿಸಿದರು.

ಈ ನಿರ್ಧಾರವನ್ನು ಕೇಂದ್ರ ಸಚಿವ ಅನುರಾಗ್​ ಠಾಕೂರ್​ ಖಂಡಿಸಿದ್ದಾರೆ. ತೃಣಮೂಲ ಕಾಂಗ್ರೆಸ್​ ಪಕ್ಷದ ಮುಖ್ಯಸ್ಥೆಗೆ ಉಗ್ರರ ಮೇಲಿರುವ ಕರುಣೆಯಷ್ಟು, ಅಮಾಯಕ ಹೆಣ್ಣುಮಕ್ಕಳ ಮೇಲೆ ಏಕಿಲ್ಲ ಎಂದು ಪ್ರಶ್ನಿಸಿದ್ದಾರೆ. ಅಲ್ಲದೆ, ಅನುರಾಗ್​ ಠಾಕೂರ್​ ಸಿನಿಮಾ ಸಹ ವೀಕ್ಷಣೆ ಮಾಡಿದ್ದಾರೆ.

ಟಿಎಂಸಿ ಸರ್ಕಾರ ವಿಧಿಸಿರುವ ನಿಷೇಧದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಚಿತ್ರದ ನಿರ್ಮಾಪಕ ವಿಪುಲ್ ಶಾ ಕೂಡ ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ‘ಭಯೋತ್ಪಾ ದಕರ ಪಿತೂರಿಗಳನ್ನು ಹೊರತರುವಲ್ಲಿ ಸಿನಿಮಾ ಯಶಸ್ವಿಯಾಗಿದೆ’ ಎಂದು ‘ದಿ ಕೇರಳ ಸ್ಟೋರಿ’ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದರು..

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!