ಒಟಿಟಿಯಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾ ಅಬ್ಬರ: ಮೂರೇ ದಿನಗಳಲ್ಲಿ 150 ಮಿಲಿಯನ್​ ವೀಕ್ಷಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಿ ಕೇರಳ ಸ್ಟೋರಿ ಸಿನಿಮಾ ದೇಶದಲ್ಲಿ ಭಾರೀ ಸಂಚಲನ ಮೂಡಿಸಿದ ಮೂವಿ.

ಆಸೀಫಾ ಎಂಬ ಯುವತಿ ರೂಮ್​ಮೇಟ್ಸ್​ ನರ್ಸಿಂಗ್​ ಕಲಿಯಲು ಪ್ರತಿಷ್ಠಿತ ಕಾಲೇಜಿಗೆ ಸೇರಿಕೊಂಡಿರೋ ಶಾಲಿನಿ ಉನ್ನಿಕೃಷ್ಣನ್ (Shalini Unnikrishnan), ಗೀತಾಂಜಲಿ, ನಿಮ್ಹಾ ಮ್ಯಾಥ್ಯುಸ್. ಆಸೀಫಾ ಈ ಮೂವರು ಹುಡುಗಿಯರ ಬ್ರೇನ್ ವಾಷ್ ಮಾಡುತ್ತಾಳೆ. ಈ ಮೂವರೂ ಆಕೆಯ ರೂಮ್ ​ಮೇಟ್ಸ್​. ಇಸ್ಲಾಂ ಬಗ್ಗೆ ಬ್ರೇನ್​ ವಾಷ್​ ಮಾಡಿ ಕೊನೆಗೆ ಅವಳದ್ದೇ ಧರ್ಮಕ್ಕೆ ಸೇರಿಸ್ತಾಳೆ. ಅವರ ಬದುಕನ್ನು ವ್ಯವಸ್ಥಿತವಾಗಿ ಪ್ಲ್ಯಾನ್ ಮಾಡಿ ನಾಶ ಮಾಡುತ್ತಾಳೆ, ಐಸಿಸ್​ ಉಗ್ರ ಸಂಘಟನೆಗೆ ಸೇರಿಸುತ್ತಾಳೆ. ಈ ಘಟನೆಯನ್ನು ಹೊಂದಿರುವ ದಿ ಕೇರಳ ಸ್ಟೋರಿ ಸಿನಿಮಾ ಎಲ್ಲೆಡೆ ಭಾರೀ ಸದ್ದು ಮಾಡಿತ್ತು.

ಕಾಂಗ್ರೆಸ್​, ತೃಣಮೂಲ ಕಾಂಗ್ರೆಸ್​, ಕಮ್ಯೂನಿಸ್ಟ್​ ಪಕ್ಷಗಳು ಈ ಭಯಾನಕ ಸತ್ಯ ಘಟನೆಯ ಚಿತ್ರವನ್ನು ಸಹಿಸಿಕೊಳ್ಳದೇ ತಮ್ಮ ರಾಜ್ಯಗಳಲ್ಲಿ ಚಿತ್ರಗಳನ್ನು ಬ್ಯಾನ್​ ಮಾಡಿದ್ದರೂ, ದಿ ಕೇರಳ ಸ್ಟೋರಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಒಂದು ವರ್ಗದಿಂದ ಭಾರಿ ಪ್ರತಿರೋಧದ ನಡುವೆಯೂ ದಿ ಕೇರಳ ಸ್ಟೋರಿ (The Kerala Story) ಸಕತ್​ ಸುದ್ದಿ ಮಾಡಿತ್ತು. ಈ ಚಿತ್ರವನ್ನು ಸುದೀಪ್ತೋ ಸೇನ್ ನಿರ್ದೇಶಿಸಿದ್ದು, ವಿಪುಲ್ ಅಮೃತಲಾಲ್ ಶಾ ನಿರ್ಮಿಸಿದ್ದಾರೆ. ಅದಾ ಶರ್ಮಾ (Adah Sharma) ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಭಾರತದ ಬಾಕ್ಸ್​ ಆಫೀಸ್​ನಲ್ಲಿ ಗಳಿಸಿದ್ದು ಬರೋಬ್ಬರಿ 242 ಕೋಟಿ ರೂಪಾಯಿ. ವಿದೇಶದ ಕಲೆಕ್ಷನ್ ಸೇರಿದರೆ ಅಂದಾಜು 303 ಕೋಟಿ ರೂಪಾಯಿ ಆಗಲಿದೆ.

ಇನ್ನು 2023ರ ಮೇ 5ರಂದು ಚಿತ್ರಮಂದಿರದಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ಮೂರು ದಿನಗಳ ಹಿಂದೆ ಒಟಿಟಿ ಅಂಗಳಕ್ಕೆ ಕಾಲಿಟ್ಟಿದೆ.‘ಜೀ5’ ಒಟಿಟಿ ಮೂಲಕ ಸಿನಿಮಾ ವೀಕ್ಷಣೆಗೆ ಲಭ್ಯವಾಗಿದೆ. ಚಿತ್ರಮಂದಿರಗಳಲ್ಲಿ ಅಬ್ಬರಿಸಿದ ರೀತಿಯೇ ಒಟಿಟಿಯಲ್ಲೂ ಸಿನಿಮಾ ಧೂಳೆಬ್ಬಿಸುತ್ತಿದೆ. ಒಟಿಟಿಯಲ್ಲೂ ‘ದಿ ಕೇರಳ ಸ್ಟೋರಿ’ ಸಿನಿಮಾವನ್ನು ಜನರು ಮುಗಿಬಿದ್ದಿದ್ದು ಹೊಸದೊಂದು ದಾಖಲೆ ಸೃಷ್ಟಿಸಿದೆ.

ಮೂರೇ ದಿನಗಳಲ್ಲಿ 150 ಮಿಲಿಯನ್​ ನಿಮಿಷಗಳ ವೀಕ್ಷಣೆ ಕಂಡಿದೆ. ಇದು ಇಲ್ಲಿಯವರೆಗೆ ದಾಖಲೆ ಎನ್ನಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!