ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿಷೇಧ: ಮಮತಾ ಬ್ಯಾನರ್ಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ದಿ ಕೇರಳ ಸ್ಟೋರಿ(The Kerala Story) ಸಿನಿಮಾವನ್ನು ಪಶ್ಚಿಮ ಬಂಗಾಳ ರಾಜ್ಯದಲ್ಲಿ ನಿಷೇಧಿಸಲಾಗಿದೆ (The Kerala Story Ban in West Bengal).

ದಿ ಕೇರಳ ಸ್ಟೋರಿ ಪ್ರದರ್ಶನ ರದ್ದುಗೊಳಿಸುತ್ತಿರುವುದಾಗಿ ಇಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (CM Mamata Banerjee) ಘೋಷಣೆ ಮಾಡಿದ್ದಾರೆ.

ದಿ ಕೇರಳ ಸ್ಟೋರಿ ಟ್ರೇಲರ್ ಬಿಡುಗಡೆಯಾದಾಗಿನಿಂದಲೂ ವಿವಾದ ಸೃಷ್ಟಿಸಿದೆ. ಕೇರಳದ ಸಾವಿರಾರು ಹಿಂದು/ಕ್ರಿಶ್ಚಿಯನ್ ಹುಡುಗಿಯರನ್ನು ಸಿರಿಯಾ-ಅಫ್ಘಾನಿಸ್ತಾನಕ್ಕೆ ಕರೆದುಕೊಂಡು ಇಸ್ಲಾಮ್​ಗೆ ಮತಾಂತರ ಮಾಡುವ, ಲವ್​ ಜಿಹಾದ್​ಗೆ ಒಳಪಡಿಸುವ, ಐಸಿಸ್ ಭಯೋತ್ಪಾದನಾ ಸಂಘಟನೆಗೆ ಸೇರಿಸುವ ಕತೆಗಳನ್ನು ಒಳಗೊಂಡಿರುವ ದಿ ಕೇರಳ ಸ್ಟೋರಿ ಮೇ 5ರಂದು ದೇಶಾದ್ಯಂತ ಬಿಡುಗಡೆಯಾಗಿದೆ.

ದೇಶಕ್ಕೆ ಒಂದು ದಾರಿಯಾದರೆ ಪಶ್ಚಿಮ ಬಂಗಾಳಕ್ಕೇ ಮತ್ತೊಂದು ದಾರಿ ಎಂಬಂತೆ ವರ್ತಿಸುವ ಮಮತಾ ಬ್ಯಾನರ್ಜಿ ಈ ವಿಚಾರದಲ್ಲೂ ಅದನ್ನೇ ಮಾಡಿದ್ದಾರೆ. ಚಿತ್ರ ಬಿಡುಗಡೆಯಾದ ಮೂರು ದಿನಗಳ ಬಳಿಕ ಅದರ ಪ್ರದರ್ಶನವನ್ನು ಪಶ್ಚಿಮ ಬಂಗಾಳದಲ್ಲಿ ಬ್ಯಾನ್ ಮಾಡಿದ್ದಾರೆ. ‘ಪಶ್ಚಿಮ ಬಂಗಾಳದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ, ಕೋಮುಗಲಭೆ, ದ್ವೇಷದ ಘಟನೆಗಳು ನಡೆಯದಂತೆ ತಡೆಯಲು ಚಿತ್ರ ಪ್ರದರ್ಶನ ರದ್ದುಗೊಳಿಸಲಾಗಿದೆ’ ಎಂದು ಹೇಳಿರುವ ಮಮತಾ ಬ್ಯಾನರ್ಜಿ, ರಾಜ್ಯದ ಒಂದೇ ಒಂದು ಸ್ಥಳದಲ್ಲಿಯೂ ದಿ ಕೇರಳ ಸ್ಟೋರಿ ಪ್ರದರ್ಶನಗೊಳ್ಳುತ್ತಿಲ್ಲ ಎಂಬುದನ್ನು ಖಾತರಿಪಡಿಸಿಕೊಳ್ಳಿ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಇದಕ್ಕೂ ಮುನ್ನ ದಿ ಕೇರಳ ಸ್ಟೋರಿ ಬಗ್ಗೆ ಮಾತನಾಡಿದ್ದ ಸಿಎಂ ಮಮತಾ ಬ್ಯಾನರ್ಜಿ ‘ದಿ ಕಾಶ್ಮೀರಿ ಫೈಲ್ಸ್ ಬಿಡುಗಡೆಯಾದಾಗ ಅದರ ಪ್ರದರ್ಶನಕ್ಕೆ ಬಿಜೆಪಿ ಹಣ ಸಂದಾಯ ಮಾಡಿತ್ತು. ಅದೇ ಮಾದರಿಯಲ್ಲಿ ಈಗ ಪಶ್ಚಿಮ ಬಂಗಾಳದಲ್ಲಿ ದಿ ಕೇರಳ ಸ್ಟೋರಿಯನ್ನು ದೊಡ್ಡಮಟ್ಟದಲ್ಲಿ ಪ್ರದರ್ಶನ ಮಾಡಿಸಲೂ ಪ್ರಯತ್ನ ಮಾಡುತ್ತಿದೆ’ ಎಂದು ಹೇಳಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!