February 24, 2026
Tuesday, February 24, 2026
spot_img

ಮಲೆಮಹದೇಶ್ವರ ಬೆಟ್ಟದಲ್ಲಿ ಭಕ್ತನ ಜೀವ ತೆಗೆದ ‘ಕಿಲ್ಲರ್ ಚಿರತೆ’ ಕೊನೆಗೂ ಸೆರೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ದಾಳಿ ನಡೆಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಯಶಸ್ವಿಯಾಗಿ ಸೆರೆಹಿಡಿದಿದೆ.

ಕರ್ನಾಟಕ ಅರಣ್ಯ ಇಲಾಖೆಯು ಡ್ರೋನ್ ಕಣ್ಗಾವಲು ಮತ್ತು ಬೋನುಗಳ ಸಹಾಯದಿಂದ ನಡೆಸಿದ ಕಾರ್ಯಾಚರಣೆಯಲ್ಲಿ, ಮಲೆಮಹದೇಶ್ವರ ಬೆಟ್ಟ ವನ್ಯಜೀವಿ ಅಭಯಾರಣ್ಯದ ಇಳಿಜಾರು ಭಾಗದಲ್ಲಿ ಚಿರತೆ ಬೋನಿಗೆ ಬಿದ್ದಿದೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿ ನಿವಾಸಿ ಪ್ರವೀಣ್ ಅವರ ಸಾವಿನ ನಂತರ ಈ ಕಾರ್ಯಾಚರಣೆ ತೀವ್ರಗೊಂಡಿತ್ತು. ಜನವರಿ 21ರ ಮುಂಜಾನೆ ದೇವಾಲಯದಿಂದ ಸುಮಾರು ಐದು ಕಿಲೋಮೀಟರ್ ದೂರದ ದಟ್ಟ ಅರಣ್ಯ ಪ್ರದೇಶದಲ್ಲಿ ಪಾದಯಾತ್ರೆ ಮಾಡುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿತ್ತು. ಈ ಘಟನೆ ಬಳಿಕ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ತಕ್ಷಣವೇ ಸುರಕ್ಷತಾ ಕ್ರಮಗಳನ್ನು ಕೈಗೊಂಡವು.

ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಲೆಮಹದೇಶ್ವರ ಬೆಟ್ಟಕ್ಕೆ ಸಂಜೆ 6ರಿಂದ ಬೆಳಗ್ಗೆ 6ರವರೆಗೆ ಪಾದಯಾತ್ರೆಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಯಾತ್ರಿಕರು ಕಡ್ಡಾಯವಾಗಿ ಅಧಿಕೃತ ಸಾರಿಗೆ ವ್ಯವಸ್ಥೆಯನ್ನೇ ಬಳಸಬೇಕು ಹಾಗೂ ಹಗಲು ವೇಳೆಯಲ್ಲಿಯೇ ಸಂಚಾರ ಮಾಡಬೇಕು ಎಂದು ಸೂಚಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !