ಹೊಸದಿಗಂತ ಡಿಜಿಟಲ್ ಡೆಸ್ಕ್:
ಶನಿವಾರ ಸಂಜೆ ಅಪರಿಚಿತ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಮಾಜಿ ಸಚಿವ ಹಾಗೂ ಎನ್‌ಸಿಪಿ ಮುಖಂಡ ಬಾಬಾ ಸಿದ್ದಿಕ್ ಅವರ ಕುಟುಂಬಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೀವ್ರ ಸಂತಾಪ ಸೂಚಿಸಿದ್ದಾರೆ. ಆದಷ್ಟು ಬೇಗ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಖರ್ಗೆ ಆಗ್ರಹಿಸಿದರು.
“ಮಹಾರಾಷ್ಟ್ರದ ಮಾಜಿ ಸಚಿವ, ಶ್ರೀ ಬಾಬಾ ಸಿದ್ದಿಕ್ ಅವರ ದುರಂತ ನಿಧನವು ಪದಗಳಲ್ಲಿ ಹೇಳಲಾಗದಷ್ಟು ಆಘಾತಕಾರಿಯಾಗಿದೆ. ಈ ದುಃಖದ ಸಮಯದಲ್ಲಿ, ನಾನು ಅವರ ಕುಟುಂಬ, ಸ್ನೇಹಿತರು ಮತ್ತು ಬೆಂಬಲಿಗರಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನ್ಯಾಯವನ್ನು ಖಾತರಿಪಡಿಸಬೇಕು. ಪ್ರಸ್ತುತ ಮಹಾರಾಷ್ಟ್ರ ಸರ್ಕಾರವು ಸಂಪೂರ್ಣ ಮತ್ತು ಪಾರದರ್ಶಕ ತನಿಖೆಗೆ ಆದೇಶಿಸಬೇಕು, ಆದಷ್ಟು ಬೇಗ ಅಪರಾಧಿಗಳನ್ನು ಬಂಧಿಸಬೇಕು” ಎಂದು ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದ್ದಾರೆ.