ಕೋವಿಡ್‌ ಪ್ರಕರಣದಲ್ಲಿ ಗಣನೀಯ ಏರಿಕೆ ಒಂದೇ ದಿನದಲ್ಲಿ 7,240 ಕೇಸ್‌ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕೋವಿಡ್‌ ಪ್ರಕರಣಗಳ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ ಏಳುಸಾವಿರದ ಗಡಿ ದಾಟಿದೆ

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 7,240 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ವರದಿಯಾಗಿದ್ದು ದೈನಂದಿನ ಪಾಸಿಟಿವಿಟಿ ದರ 2.13%ಕ್ಕೆ ಏರಿಕೆಯಾಗಿದೆ. ಇದು ನಿನ್ನೆಗೆ ಹೊಲಿಸಿದರೆ 38.4% ಏರಿಕೆಯಾದಂತಾಗಿದೆ. ಒಟ್ಟೂ 32,498 ಸಕ್ರಿಯ ಕೋವಿಡ್‌ ಪ್ರಕರಣಗಳಿವೆ.

ದೇಶದಾದ್ಯಂತ 3,591 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು ಚೇತರಿಕಾ ದರವು 98.71% ದಷ್ಟಿದೆ. ಒಟ್ಟೂ 194.59 ಕೋಟಿಗೂ ಅಧಿಕ ಲಸಿಕೆ ವಿತರಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!