ರಾಜ್ಯದಲ್ಲಿ ಇಂದು 1,001 ಮಂದಿಗೆ ಕೋವಿಡ್ ದೃಢ, ಪಾಸಿಟಿವಿಟಿ ದರ 1.42% ಕ್ಕೆ ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಇಂದು 1,001 ಮಂದಿಗೆ ಕೋವಿಡ್ ದೃಢಪಟ್ಟಿದ್ದು, 18 ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 485 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,001 ಜನರಿಗೆ ಸೋಂಕು ದೃಢಪಟ್ಟಿದ್ದು, ಇಂದು ಪಾಸಿಟಿವಿಟಿ ದರ 1.42%ಕ್ಕೆ ಇಳಿದಿದೆ ಎಂದಿದ್ದಾರೆ.
ಇಂದು1,780 ಜನ ಸೋಂಕಿನಿಂದ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ 12,634 ಕ್ಕೆ ತಲುಪಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!