ಕೆ.ಎಸ್.ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಗೆ ಸಿಕ್ಕಿತು ಚಾಲನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿಯಲ್ಲಿ ಮಂಗಳವಾರ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನೇತೃತ್ವದ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ ನೀಡಲಾಯಿತು.

ಕೆ.ಎಸ್ ಈಶ್ವರಪ್ಪರಿಂದ ಕನ್ನೆರಿ ಮಠದ ಕಾಡಸಿದ್ದೇಶ್ವರ ಶ್ರೀಗಳ ಪಾದಪೂಜೆ ನೆರವೇರಿತು. ಶ್ರೀಗಳಿಗೆ ಪಾದಪೂಜೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇದೆ ವೇಳೆ ಕನ್ನೆರಿ ಮಠದ ಸ್ವಾಮೀಜಿ ಕ್ರಾಂತಿವೀರ ಬ್ರಿಗೇಡ್ ಲಾಂಛನ ಬಿಡುಗಡೆ ಮಾಡಿದರು.

ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಹಾಗೂ ಹಲವು ಸ್ವಾಮೀಜಿಗಳ ಸಮ್ಮುಖದಲ್ಲಿ ಈಶ್ವರಪ್ಪ ಗೋ ಪೂಜೆ ಸಲ್ಲಿಸಿದರು. ನೀಲಕಂಠ ಶಾಸ್ತ್ರಿಗಳ ನೇತೃತ್ವದಲ್ಲಿ ವೇದ ಘೋಷಗಳ ಪಠಣ ನಡೆಯಿತು.ಇದೇ ವೇಳೆ, 1008 ಸಾಧು ಸಂತರ ಪಾದ ಪೂಜೆಯನ್ನು ನೆರವೇರಿಸಲಾಯಿತು. ಇದಕ್ಕೂ ಮುನ್ನ 1008 ಮಹಿಳೆಯರು ಕುಂಭ, ಕಲಾ ತಂಡಗಳು ಹಾಗೂ ವಾದ್ಯಗಳೊಂದಿಗೆ ಮೆರವಣಿಗೆ ಜರುಗಿತು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!