Saturday, June 25, 2022

Latest Posts

ಹಾಸನದಲ್ಲಿ ಕಂಪಿಸಿದ ಭೂಮಿ: ಸಿಹಿ ನಿದ್ದೆಯಲ್ಲಿದ್ದವರಿಗೆ ಶಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಹಾಸನ ಜಿಲ್ಲೆಯ ಹಲವೆಡೆ ಇಂದು ಬೆಳಗಿನ ಜಾವ ಭೂಮಿ ಕಂಪಿಸಿದೆ. ಬೆಳಗಿನಜಾವ 4.35ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವ ಇಲ್ಲಿನ ಜನತೆಗಾಗಿದ್ದು, ಸಿಹಿ ನಿದ್ದೆಯಲ್ಲಿದ್ದ ಜನತೆ ಭಯಬಿದ್ದು ಮನೆಯಿಂದ ಹೊರ ಓಡಿ ಬಂದಿದ್ದಾರೆ.

ಎಲ್ಲೆಲ್ಲಿ ಕಂಪನದ ಅನುಭವ?

ಹೊಳೆನರಸೀಪುರ, ಅರಕಲಗೂಡು ತಾಲೂಕು, ಮುದ್ದನಹಳ್ಳಿ, ಹನೆಮಾರನಹಳ್ಳಿ, ಕಾರಹಳ್ಳಿ, ಗ್ರಾಮಗಳಲ್ಲಿ ಹಾಗೂ ಹಾಸನ ತಾಲೂಕಿನ ಮಲ್ಲೆದೇವರಪುರ, ಕಾರ್ಲೆ ಅಂಕನಹಳ್ಳಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಸ್ಪಷ್ಟ ಅನುಭವವಾಗಿದೆ. ಘಟನೆಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ದೃಢಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss