ವೃತ್ತಿಜೀವನದ ಕೊನೆಯ ಗ್ರ್ಯಾನ್​ ಸ್ಲಾಮ್: ಫೈನಲ್​ ಪ್ರವೇಶಿಸಿದ ಸಾನಿಯಾ ಮಿರ್ಜಾ-ರೋಹನ್ ಬೋಪಣ್ಣ ಜೋಡಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಸ್ಟ್ರೇಲಿಯಾ ಓಪನ್(Australian Open 2023)​ ಟೆನಿಸ್​ ಟೂರ್ನಿಯ ಮಿಶ್ರ ಡಬಲ್ಸ್​ ವಿಭಾಗದಲ್ಲಿ ಭಾರತದ ಸಾನಿಯಾ ಮಿರ್ಜಾ-ರೋಹನ್​ ಬೋಪಣ್ಣ ಜೋಡಿ ಫೈನಲ್​ ಪ್ರವೇಶಿಸಿದ್ದಾರೆ.

ಈ ಮೂಲಕ ತಮ್ಮ ವೃತ್ತಿಜೀವನದ ಕೊನೆಯ ಗ್ರ್ಯಾನ್​ ಸ್ಲಾಮ್ ಆಡುತ್ತಿರುವ ಸಾನಿಯಾ ಮಿರ್ಜಾ ಪ್ರಶಸ್ತಿಯೊಂದನ್ನು ಖಾತ್ರಿ ಪಡಿಸಿದ್ದಾರೆ.
​ಬುಧವಾರ ನಡೆದ ಮಿಶ್ರ ಡಬಲ್ಸ್​ ವಿಭಾಗದ ಸೆಮಿಫೈನಲ್ ಕಾದಾಟದಲ್ಲಿ​ ಸಾನಿಯಾ ಮಿರ್ಜಾ-ಬೋಪಣ್ಣ ಜೋಡಿ ಮೂರನೇ ಶ್ರೇಯಾಂಕದ ದೇಸಿರೆ ಕ್ರಾವ್‌ಜಿಕ್ ಮತ್ತು ನೀಲ್ ಸ್ಕುಪ್ಸ್​ಕಿ ಅವರನ್ನು 7-6(5), 6-7(5), 10-6 ಸೆಟ್‌ಗಳಿಂದ ಸೋಲಿಸಿ ಫೈನಲ್​ಗೆ ಲಗ್ಗೆ ಇಟ್ಟಿದ್ದಾರೆ.

​ಪಂದ್ಯದ ಬಳಿಕ ಮಾತನಾಡಿದ ಸಾನಿಯಾ ಮಿರ್ಜಾ ,  ನನ್ನ ವೃತ್ತಿಜೀವನದ ಕೊನೆಯ ಗ್ರ್ಯಾನ್​ ಸ್ಲಾಮ್ ಟೂರ್ನಿ ಸ್ಮರಣೀಯವಾಗಲು ಇನ್ನೊಂದು ಮೆಟ್ಟಿಲು ಬಾಕಿ ಇದೆ. ಫೈನಲ್​ನಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಹೇಳಿದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!