ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.
ಮೃತ ವಕೀಲೆಯನ್ನು 25 ವರ್ಷದ ವಾಸುಕಿ ಎಂದು ಗುರುತಿಸಲಾಗಿದ್ದು, ಇಂದು ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.