ಹೊಸದಿಗಂತ ಡಿಜಿಟಲ್ ಡೆಸ್ಕ್:
ಎಲ್ಲೆಡೆ ಬಿಜೆಪಿ-ಜೆಡಿಎಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ವಿಚಾರಕ್ಕೆ ಕಾಂಗ್ರೆಸ್ ಇಂದು ಬಿಜೆಪಿ ಜೆಡಿಎಸ್ ವಿರುದ್ಧ ಹೋರಾಟ ನಡೆಸುತ್ತಿದೆ. ಇಂದು ಬೆಳಗ್ಗೆ 10 ಗಂಟೆಗೆ ರಾಜಭವನ ಚಲೋ ಆರಂಭವಾಗಲಿದೆ. ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನದವರೆಗೆ ಕಾಂಗ್ರೆಸ್ ನಾಯಕರು ಚಲೋ ನಡೆಸಲಿದ್ದಾರೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ.