ಹೊಸದಿಗಂತ ಡಿಜಿಟಲ್ ಡೆಸ್ಕ್:
ತೆಂಕುತಿಟ್ಟು ಯಕ್ಷಗಾನ ರಂಗದ ಹಿರಿಯ ಅರ್ಥದಾರಿ ವಿಟ್ಲ ಶಂಭು ಶರ್ಮ ವಿಧಿವಶರಾಗಿದ್ದಾರೆ.
ಅವರಿಗೆ 74 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಲ್ಲಿದ್ದ ಅವರು ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಪುತ್ತೂರು ಸಮೀಪ ಮುರ ಎಂಬಲ್ಲಿ ವಾಸಿಸುತ್ತಿದ್ದ ಅವರು, ಉಪನ್ಯಾಸಕರಾಗಿ, ಯಕ್ಷಗಾನ ಅರ್ಥಧಾರಿಯಾಗಿ ಭಾರೀ ಪ್ರಸಿದ್ಧಿ ಪಡೆದಿದ್ದರು.
ಶೇಣಿ ಗೋಪಾಲಕೃಷ್ಣ ಭಟ್ ಅವರಂತಹಾ ಅನೇಕ ಖ್ಯಾತನಾಮರೊಂದಿಗೆ ತಾಳಮದ್ದಳೆಗಳಲ್ಲಿ ಅರ್ಥಗಾರಿಕೆ ಮಾಡಿದ ಅನುಭವಿಯಾಗಿದ್ದ ಶರ್ಮರು, ಖಳಪಾತ್ರ ಸಹಿತ ಯಾವುದೇ ಪಾತ್ರ ವಹಿಸಿದರೂ ಪಾತ್ರಕ್ಕೆ ಘನತೆ ತಂದಿಡುತ್ತಿದ್ದರು.
ಶಂಭು ಶರ್ಮ ಅವರು ಪತ್ನಿ, ಪುತ್ರನ ಸಹಿತ ಅಪಾರ ಅಭಿಮಾನಿಗಳು, ಬಂಧು, ಬಾಂಧವರು, ಅಭಿಮಾನಿಗಳನ್ನು ಅಗಲಿದ್ದಾರೆ.

