ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೆಂಗನಹಳ್ಳಿ ಗ್ರಾಮದ ಹೊರವಲಯದಲ್ಲಿನ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ.
ರೈತರು ಜಮೀನುಗಳಿಗೆ ತೆರಳುತ್ತಿದ್ದ ವೇಳೆ ಚಿರತೆ ಕಾಣಿಸಿಕೊಂಡಿದ್ದು ಕೆಂಗನಹಳ್ಳಿ ಸೇರಿದಂತೆ ಗುನನ್ಹಳ್ಳಿ ಗ್ರಾಮದ ಜನ ಆತಂಕಗೊಂಡಿದ್ದಾರೆ.
ಇದರಿಂದ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಮುನಿಸ್ವಾಮಿ ಎಂಬಾತ ಡ್ರೋನ್ ಕ್ಯಾಮೆರಾ ತರಿಸಿ ಚಿರತೆಯ ಚಲನವಲನಗಳನ್ನು ಸೆರೆ ಮಾಡಿಸಿದ್ದಾರೆ. ಕೆಂಗನಹಳ್ಳಿ ಬೆಟ್ಟದಲ್ಲಿ ಚಿರತೆ ಇರೋದು ದೃಢವಾಗಿದ್ದು ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗಿದೆ.