ಬೆಂಗಳೂರಿಗೆ ಮತ್ತೆ ಬಂತು ಚಿರತೆ, ಈ ಏರಿಯಾ ಕಡೆ ಹೋಗೋಕೆ ಹಿಂದೇಟು ಹಾಕ್ತಿರೋ ಆಟೋ, ಕ್ಯಾಬ್‌!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್‌ ಬ್ಲಾಕ್‌ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ.

3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಈ ಚಿರತೆಯನ್ನು ಕೂಡಲೇ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ. ಇನ್ನು ಆಟೋ, ಕ್ಯಾಬ್‌ಗಳು ಈ ಏರಿಯಾ ಕಡೆ ಹೋಗೋದಕ್ಕೆ ಹಿಂದೇಟು ಹಾಕುತ್ತಿವೆ.

ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ. ಡೆಲಿವರಿ ಬಾಯ್ಸ್ ಯಾವುದೇ ವಸ್ತುಗಳನ್ನು ಸಪ್ಲೈ ಮಾಡುತ್ತಿಲ್ಲ.

ಚಿರತೆ ಪ್ರತ್ಯಕ್ಷ ಹಿನ್ನೆಲೆ ನೀರಿನ ಟ್ಯಾಂಕರ್‌ನವರೂ ಏರಿಯಾಗೆ ಬರುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ನಿವಾಸಿಗಳು ಅಳಲು ತೊಡಿಕೊಂಡಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಹಾಗಾಗಿ ನಿವಾಸಿಗಳು ಜೀವ ಕೈಯಲ್ಲಿಡಿದು ಜೀವನ ಮಾಡುವಂತಾಗಿದೆ.

ಇನ್ನು ನಿವಾಸಿಯೊಬ್ಬರು ಈ ಬಗ್ಗೆ ಸೊಶೀಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ನಮ್ಮ ಅಪಾರ್ಟ್‌ಮೆಂಟ್‌ನ ಪಕ್ಕದಲ್ಲಿರುವ ತುರಹಳ್ಳಿ ಅರಣ್ಯದೊಳಗಿನ ಬಂಡೆಯೊಂದರ ಮೇಲೆ ಚಿರತೆ ಮಲಗಿಕೊಂಡಿರುವುದು ಕಂಡುಬಂತು. ಸಂಜೆ 5.30ರ ಸುಮಾರಿಗೆ ತಮ್ಮ ಅಪಾರ್ಟ್‌ಮೆಂಟ್‌ ಬಾಲ್ಕನಿಯಿಂದ ನೋಡಿರುವುದಾಗಿ ಹೇಳಿದ್ದಾರೆ.

- Advertisement - Ply

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!