ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಜನರ ನಿದ್ದೆಗೆಡಿಸಿದ ಚಿರತೆ ಕೊನೆಗೂ ಸೆರೆಯಾಗಿದೆ.
ಬೆಂಗಳೂರು ಹೊರವಲಯದಲ್ಲಿ ಕಳೆದ ಹಲವು ದಿನಗಳಿಂದ ಸಾರ್ವಜನಿಕವಾಗಿ ಪದೇ ಪದೇ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.ಅರಣ್ಯ ಇಲಾಖೆಯ ಹತ್ತಾರು ಸಿಬ್ಬಂದಿಗಳು ಚಿರತೆಯನ್ನು ಟ್ರ್ಪಾಪ್ ಮಾಡಿ ಸೆರೆ ಹಿಡಿದಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಚಿರತೆ ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಇದರೊಂದಿಗೆ ಐಟಿಬಿಟಿ ಸಿಟಿ ಖ್ಯಾತಿಯ ಎಲೆಕ್ಟ್ರಾನಿಕ್ ಸಿಟಿ ಸ್ಥಳೀಯರು ಹಾಗೂ ಐಟಿ ಬಿಟಿ ಮಂದಿ ಆತಂಕಕ್ಕೆ ಒಳಗಾಗಿದ್ದರು.