ಹೊಸದಿಗಂತ ವರದಿ,ಮೈಸೂರು:
ಗ್ರಾಮಸ್ಥರಿಗೆ ಉಪಟಳ ನೀಡುತ್ತಾ, ಭಯ, ಆತಂಕವನ್ನುoಟು ಮಾಡಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದು ಸೆರೆಯಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಹಲವು ದಿನಗಳಿಂದ ಗ್ರಾಮದೊಳಗೆ ಹಾಗೂ ಹೊರವಲಯದಲ್ಲಿ ಸಂಚರಿಸುತ್ತಿದ್ದ ಈ ಚಿರತೆ, ಸಾಕು ಪ್ರಾಣಿಗಳನ್ನು ಬಲಿ ಪಡೆಯುತ್ತಿತ್ತು. ಇದರಿಂದಾಗಿ ಭಯಾತಂಕಗೊಳಗಾಗಿದ್ದ ಗ್ರಾಮಸ್ಥರು ಕೂಡಲೇ ಚಿರತೆಯನ್ನು ಸೆರೆ ಹಿಡಿಯಬೇಕು ಎಂದು ಅರಣ್ಯಾಧಿಕಾರಿಗಳನ್ನು ಒತ್ತಾಯಿಸಿದ್ದರು.
ಈ ಹಿನ್ನಲೆಯಲ್ಲಿ ಗ್ರಾಮದ ಹೊರವಲಯದ ಜಮೀನೊಂದರಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಮಂಗಳವಾರ ಬೆಳಗಿನ ಜಾವ ಚಿರತೆ ಬಿದ್ದಿದೆ. ಇತ್ತಿಚೇಗೆ ಟಿ.ನರಸೀಪುರದ ತಲಕಾಡಿನಲ್ಲಿಯೂ ೫ ವರ್ಷದ ಹೆಣ್ಣು ಚಿರತೆಯನ್ನು ಸೆರೆ ಹಿಡಿಯಲಾಗಿತ್ತು.