Wednesday, February 8, 2023

Latest Posts

ಪತ್ನಿಯನ್ನು ಗುಂಡಿಕ್ಕಿ ಕೊಂದು ತಾನೂ ಶೂಟ್ ಮಾಡಿಕೊಂಡ ಲೆಫ್ಟಿನೆಂಟ್ ಕರ್ನಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ವೈವಾಹಿಕ ಕಲಹದಿಂದ ಬೇಸತ್ತು ಲೆಫ್ಟಿನೆಂಟ್ ಕರ್ನಲ್ ಭಾನುವಾರ ರಾತ್ರಿ ಪತ್ನಿಯನ್ನು ಗುಂಡಿಕ್ಕಿ ಕೊಂದು, ತಾವೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಫಿರೋಜ್ಪುರ ಕಂಟೋನ್ಮೆಂಟ್ನಲ್ಲಿ ನಡೆದಿದೆ.

ಮೃತ ಅಧಿಕಾರಿಯನ್ನು ಲೆಫ್ಟಿನೆಂಟ್ ಕರ್ನಲ್ ನಿಶಾಂತ್ ಪರ್ಮಾರ್ ಮತ್ತು ಅವರ ಪತ್ನಿ ಡಿಂಪಲ್ ಎಂದು ಗುರುತಿಸಲಾಗಿದೆ.

ಇನ್ನು ದಂಪತಿಗೆ ಒಬ್ಬನೇ ಒಬ್ಬ ಮಗನಿದ್ದು, ಮಗನೂ ಅವರೊಂದಿಗೆ ವಾಸಿಸುತ್ತಿರಲಿಲ್ಲ. ಡಿಂಪಲ್ ಅವರು ನಿಶಾಂತ್ ಗೆ ಎರಡನೇ ಪತ್ನಿ ಎಂದು ತಿಳಿದು ಬಂದಿದೆ.

ಫಿರೋಜ್ಪುರ ಕಂಟೋನ್ಮೆಂಟ್ನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಭಾನುವಾರ ರಾತ್ರಿ 42 ವರ್ಷದ ಪತ್ನಿ ಡಿಂಪಲ್(ಗೃಹಿಣಿ) ಅವರ ತಲೆಗೆ ಗುಂಡು ಹಾರಿಸಿ ನಂತರ ಕತ್ತು ಹಿಸುಕಿ ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬಳಿಕ ತನ್ನ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ಕುರಿತು ಸೇನಾ ಅಧಿಕಾರಿಗಳು ಮತ್ತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!