ತುಂಬಿ ಹರಿಯುತ್ತಿದ್ದಾಳೆ ಕನ್ನಡಿಗರ ಜೀವನಾಡಿ: 101 ಅಡಿಗೆ ತಲುಪಿದ ಕೆಆರ್‌ಎಸ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 101 ಅಡಿಯನ್ನು ದಾಟಿದೆ.

ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಿದ 5-6 ದಿನಗಳಲ್ಲೇ ಕಾವೇರಿ ಕಣಿವೆಯ ಕೇರಳದ ವಯನಾಡು, ಕೊಡಗಿನ ಕಾವೇರಿ ನದಿ ಪಾತ್ರದಲ್ಲಿ ವ್ಯಾಪಕ ಮಳೆ ಸುರಿದಿದೆ, ಇದರಿಂದಾಗಿ ಕೆ.ಆರ್.ಎಸ್ ಅಣೆಕಟ್ಟೆಯ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿತ್ತು.

ಕಳೆದ ಆರೇಳು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಅಬ್ಬರದಿಂದ ಆರ್ಭಟಿಸಿದ್ದು, ಕಾವೇರಿ ನದಿಯ ಜೀವಕಳೆ ಪಡೆದು ತುಂಬಿಹರಿಸುತ್ತಿದೆ. ಅಣೆಕಟ್ಟೆಯ ನೀರಿನ ಮಟ್ಟ 101 ಅಡಿಗೆ ಏರಿಕೆಯಾಗಿದೆ.

ಇನ್ನು ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯ ಭರ್ತಿಯಾಗುವ ಹಂತಕ್ಕೆ ಬಂದಿದೆ. 2,284 ಅಡಿ ಸಾಮರ್ಥ್ಯ ಇರುವ ಜಲಾಶಯದಲ್ಲಿ ಸದ್ಯ 2,277.69 ಅಡಿ ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 18,018 ಕ್ಯೂಸೆಕ್‌ ಒಳ ಹರಿವು ಇದ್ದು, ಪ್ರಸ್ತುತ ಜಲಾಶಯದಲ್ಲಿ 15.74 ಟಿಎಂಸಿ ನೀರಿದ್ದು, ಒಟ್ಟು ಸಾಮರ್ಥ್ಯ 19.52 ಟಿಎಂಸಿ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!