Friday, June 2, 2023

Latest Posts

ಜೀವಜಲವೇ ವಿಷವಾಯ್ತು, 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಯಚೂರಿನ ದೇವದುರ್ಗದ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ.

ಅಸ್ವಸ್ಥರಾದವರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ಈ ಘಟನೆ ಸಂಭವಿಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಊರಿಗೆ ಬಂದಿದ್ದಾರೆ.

ಸದ್ಯಕ್ಕೆ ಯಾರೂ ಕುಡಿಯುವ ನೀರಿನ ಸೇವನೆ ಮಾಡಬಾರದು ಎಂದು ಹೇಳಲಾಗಿದ್ದು, ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಅಸ್ವಸ್ಥಗೊಂಡವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿತ್ತು. ನೀರಿನಿಂದ ಹೀಗೆ ಆಗಿದ್ದು ಯಾಕೆ ಎನ್ನುವ ಬಗ್ಗೆ ಪರೀಕ್ಷೆಗಳು ನಡೆಯುತ್ತಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!