ಎಲ್ಲರ ಪ್ರಶಂಸೆಗೆ ಪಾತ್ರವಾಗ್ತಿದೆ ಬೆಂಗಳೂರು ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಲುಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಲುಕ್ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಉದ್ಘಾಟನೆಗೆ ಸಿದ್ಧಗೊಂಡಿರುವ ಟರ್ಮಿನಲ್ ಕುರಿತ ದೃಶ್ಯ ತುಣುಕುಗಳನ್ನು ಸಚಿವ ಮುರುಗೇಶ ನಿರಾಣಿ ತಮ್ಮ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಈ ಯೋಜನೆಯ ರನ್‌ವೇ ಮತ್ತು ರಸ್ತೆಯನ್ನು ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಿರ್ಮಿಸಲಾಗಿದ್ದು, ಉದ್ಯಾನನಗರಿ ಬೆಂಗಳೂರಿನ ಸತ್ವವನ್ನು ಇಲ್ಲಿ ಕಾಣಬಹುದಾಗಿದೆ.

ಪ್ರಯಾಣಿಕರ ಮನಸ್ಸಿಗೆ ಖುಷಿ ಉಂಟುಮಾಡುವುದರ ಜತೆಗೆ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ರೀತಿ ಟರ್ಮಿನಲ್-2 ವಿನ್ಯಾಸಗೊಂಡಿದೆ. ಟರ್ಮಿನಲ್-2ನ್ನು ಪ್ರಧಾನಿ ಮೋದಿಯವರು ನ.10ರಂದು ಉದ್ಘಾಟಿಸಲಿದ್ದಾರೆ.

 

 

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!