ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನ ಮುಲ್ಕಿಯಲ್ಲಿ (Mulki) ಲಾರಿ (Lorry) ಚಾಲಕನೋರ್ವ ಯಡವಟ್ಟಿನಿಂದ ನಿಯಂತ್ರಣ ತಪ್ಪಿ ಹೆದ್ದಾರಿ ಬಿಟ್ಟು ಸರ್ವಿಸ್ ರಸ್ತೆಗೆ ನುಗ್ಗಿದ್ದು ಅಟೋ ರಿಕ್ಷಾ ಹಾಗೂ ಬೈಕ್ ಜಖಂ ಆಗಿದ್ದು ರಸ್ತೆ ಬದಿ ಕುಳಿತ ಕಾರ್ಮಿಕರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ.
ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮುಲ್ಕಿ ಜಂಕ್ಷನ್ ನಲ್ಲಿ ಉಡುಪಿ ಕಡೆಯಿಂದ ಬಂದ ಮೈನ್ಸ್ ಸಾಗಾಟದ ಖಾಲಿ ಲಾರಿ ಅತೀ ವೇಗದಿಂದ ಏಕಾಏಕಿ ಹೆದ್ದಾರಿಯಿಂದ ಸರ್ವಿಸ್ ರಸ್ತೆಗೆ ಬಂದಿದೆ. ಈ ವೇಳೆ ಸರ್ವಿಸ್ ರಸ್ತೆಯಲ್ಲಿ ಹೋಗುತ್ತಿದ್ದ ಒಂದು ಸ್ಕೂಟರ್, ಒಂದು ಆಟೋಗೆ ಡಿಕ್ಕಿ ಹೊಡೆದಿದ್ದು ಎರಡು ವಾಹನವೂ ಪಲ್ಟಿಯಾಗಿ ರಸ್ತೆಯಿಂದ ಎಸೆಯಲ್ಪಟ್ಟಿದೆ. ಜೊತೆಗೆ ಅಲ್ಲೇ ಇದ್ದ ಟ್ರಾಫಿಕ್ ಹೆಡ್ ಕಾಸ್ಟೇಬಲ್ ಗೀತಾ ಎಂಬವರಿಗೂ ಗಾಯವಾಗಿದೆ.
ರಸ್ತೆ ಬದಿಯಲ್ಲಿ ಸುಮಾರೂ ಹತ್ತಕ್ಕೂ ಹೆಚ್ಚು ಮಂದಿ ಕೂಲಿ ಕಾರ್ಮಿಕರಿದ್ದು ಯಾರಿಗೂ ಯಾವುದೇ ತೊಂದರೆಯಾಗದೆ ಪಾರಾಗಿದ್ದಾರೆ. ಇ
ಚಾಲಕನ ವಿರುದ್ಧ ನಿರ್ಲಕ್ಷ್ಯದ ಚಾಲನೆ ಪ್ರಕರಣ ದಾಖಲಿಸಿಕೊಂಡ ಮುಲ್ಕಿ ಪೊಲೀಸರು ಚಾಲಕ ಧಾರವಾಡ ಮೂಲದ ಮಂಜುನಾಥನನ್ನು ಬಂಧಿಸಿದ್ದಾರೆ.