ಹೊಸದಿಗಂತ ವರದಿ ಹುಬ್ಬಳ್ಳಿ:
ಲಾರಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ರಸ್ತೆಯಲ್ಲಿದ್ದ ರಾಡ್ ಚಾಲಕ ಎದೆಗೆ ಸೇರಿ, ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ಹೊಲಿಹಳ್ಳಿ ಗ್ರಾಮದ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಶಿರಸಿ ಮೂಲದ ಶಿವಾನಂದ ಬಡಗಿ ಗಂಭೀರವಾಗಿ ಗಾಯಗೊಂಡ ಲಾರಿ ಚಾಲಕ. ಲಾರಿಯು ಹುಬ್ಬಳ್ಳಿಯಿಂದ ದಾವಣಗೆರೆ ಹೊರಟಿತ್ತು. ಆಗ ಚಾಲಕ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಆಗ ಕಬ್ಬಿಣ ರಾಡ್ ಚಾಲಕ ಎದೆಯ ಹತ್ತಿರ ಸೇರಿದ್ದು, ಗಂಭೀರವಾಗಿ ಗಾಯಗೊಂಡಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಚಾಲಕನನ್ನು ರಾಡ್ ನೊಂದಿಗೆ ಹುಬ್ಬಳ್ಳಿ ಕೆಎಂಸಿಆರ್ ಐಗೆ ರವಾನಿಸಲಾಗಿದೆ.
ಆದರೆ ಕೆಎಂಸಿಆರ್ ಐ ವೈದ್ಯರಿಗೆ ಚಿಕಿತ್ಸೆ ನೀಡುವುದು ತಲೆ ನೋವಾಗಿ ಪರಿಣಮಿಸಿದೆ. ಸದ್ಯ ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಎದೆಗೆ ಸೇರಿದ ರಾಡ್ ಹೊರ ತೆಗೆಯಲಾಗಿದೆ. ಗಾಯಗೊಂಡ ಚಾಲಕ ಶಿವಾನಂದ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೆಎಂಸಿಆರ್ ಐ ವೈದ್ಯರು ತಿಳಿಸಿದ್ದಾರೆ.