ಕೆರೆಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ್ದು ಖಂಡನೀಯ: ಸುನೀಲ್‍ ಕುಮಾರ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ಶನಿವಾರ ರಾತ್ರಿ ಹನುಮಧ್ವಜ ಹಾರಿಸಿದ್ದು, ಪೊಲೀಸರನ್ನು ಬಳಸಿ ಕೆಳಗೆ ಇಳಿಸಿದ್ದನ್ನು ಖಂಡಿಸುತ್ತೇನೆ. ಒಂದು ಧ್ವಜ ಇಳಿಸಿದ್ರೆ, ಸಾವಿರಾರು ಧ್ವಜ ಹಾರಿಸಬೇಕಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್‍ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದಕ್ಕೆ ಗೃಹ ಇಲಾಖೆ ನೇರ ಹೊಣೆ ಆಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಸುತ್ತೇವೆ. ಸ್ಥಳೀಯ ಅಧಿಕಾರಿಗಳು ದೊಡ್ಡ ವಿವಾದ ಮಾಡಲು ಹೊರಟಿದ್ದಾರೆ. ಇದು ಆಕ್ಷೇಪಾರ್ಹ ಎಂದು ತಿಳಿಸಿದರು.

ಗ್ರಾಮದ ಜನ ಒಗ್ಗಟ್ಟಾಗಿ ಹನುಮ ಧ್ವಜ ಹಾರಿಸಲು ಮುಂದಾಗಿದ್ದಾರೆ. ಅಲ್ಲದೆ, ಸ್ಥಳೀಯರ ಮೇಲೆ ಲಾಠಿ ಪ್ರಹಾರ ನಡೆದಿದೆ. ಯಾಕೆ ಇಳಿಸಲಾಗುತ್ತಿದೆ ಎಂದು ಕೇಸರಿ ವಿರೋಧಿ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ವಿವರಿಸಿದರು.

ಅಯೋಧ್ಯೆ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ ದಿನ ಎಲ್ಲರೂ ಸಂಭ್ರಮದಿಂದ ಪಾಲ್ಗೊಂಡಿದ್ದಾರೆ. ಸಹಜವಾಗಿ ಎಲ್ಲರ ಮನೆ ಮೇಲೆ ಕೇಸರಿ ಧ್ವಜ ಹಾರಿಸಿದ್ದಾರೆ. ಜೊತೆಗೆ ನಂದಾ ದೀಪ ಹಚ್ಚಿದ್ದಾರೆ. ಆ ಗ್ರಾಮದಲ್ಲಿ ಕೂಡ ಧ್ವಜ ಹಾರಿಸಿ, ರಾಮನ ಫೋಟೋ ಹಾಕಿ ಪೂಜೆ ಮಾಡಿದ್ದಾರೆ. ಇದನ್ನು ಸರ್ಕಾರ ಸಹಿಸುತ್ತಿಲ್ಲ, ಇನ್ಯಾವುದನ್ನು ಸಹಿಸ್ತೀರಾ ಎಂದು ಕೇಳಿದರು.

ಹಿಂದೂ ಧ್ವಜ ಹಾರಿಸೋದನ್ನು ತಡೆಯುತ್ತೀರಾ? ರಾಜ್ಯದ ಎಲ್ಲೆಂದರೆ ಅಲ್ಲಿ ಘೋರಿ ಇದೆ. ಹಸಿರು ಧ್ವಜ ಹಾರಾಡುತ್ತಿದೆ. ಅದನ್ನು ನಾವು ತೋರಿಸುತ್ತೇವೆ. ತೆರವು ಮಾಡುವ ಕ್ರಮ ಮಾಡ್ತೀರಾ.? ಎಂದು ಪ್ರಶ್ನೆಯನ್ನು ಮುಂದಿಟ್ಟರು. ಅನಧಿಕೃತ ಧ್ವಜ ತೆರವಿಗೆ ಸರ್ಕಾರದ ನಿರ್ದೇಶನ, ಕ್ರಮ ಏನಿದೆ ಎಂದು ಸ್ಪಷ್ಟಪಡಿಸಲು ಆಗ್ರಹಿಸಿದರು.
ಒಂದು ಕಡೆ ಕಾಂಗ್ರೆಸ್ ನಾಯಕರು ಅಯೋಧ್ಯೆಗೆ ಹೋಗಲ್ಲ ಅಂತಾರೆ. ಮತ್ತೊಂದು ಕಡೆ ಪೊಲೀಸರನ್ನು ಬಳಸಿ ಕೇಸರಿ ಧ್ವಜ ಇಳಿಸುವ ಕೆಲಸ ಮಾಡ್ತಿದೆ ಎಂದು ಆಕ್ಷೇಪಿಸಿದ ಅವರು, ನಮ್ಮ ನಾಯಕರು ಮಂಡ್ಯ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!