ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದು ಬಿದ್ದ ವ್ಯಕ್ತಿ ಸ್ಥಳದಲ್ಲೇ ಮೃತ್ಯು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರಿನಲ್ಲಿ ನರೇಗಾ ಕೆಲಸ ಮಾಡುತ್ತಿದ್ದ ವೇಳೆ ವ್ಯಕ್ತಿಯೊಬ್ಬ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ಶರಣಪ್ಪ ಸಮಗಾರ (42) ಘಟನೆಯಲ್ಲಿ ಮೃತಪಟ್ಟವರು . ಈ ವ್ಯಕ್ತಿಯ ಸಾವಿಗೆ ನಿಖರ ಕಾರಣ ಇನ್ನು ಸರಿಯಾಗಿ ತಿಳಿದುಬಂದಿಲ್ಲ. ಬಿಸಿಲಿನ ತಾಪದಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಇನ್ನು ಕೆಲವರು ಹೇಳುವ ಪ್ರಕಾರ ಕೆಲಸ ಮಾಡುವಾಗ, ಅವರು ಇದ್ದಕ್ಕಿದ್ದಂತೆ ನೆಲಕ್ಕೆ ಬಿದ್ದು ಸಾವನ್ನಪ್ಪಿದರು ಎಂದು ಹೇಳಲಾಗಿದೆ.

ಸದ್ಯ ಈ ಘಟನೆ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!