ಬೀದಿ ನಾಯಿಗಳು ದಿನಾ ಬೊಗಳ್ತವೆ, ಸೌಂಡ್‌ ಕೇಳೋಕಾಗಲ್ಲ ಎಂದು ಮರ್ಡರ್‌ ಮಾಡಿದ ವ್ಯಕ್ತಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಯಿಗಳು ರಾತ್ರಿಯೆಲ್ಲಾ ಬೊಗಳುತ್ತವೆ. ನಿದ್ದೆ ಬರೋದಿಲ್ಲ ಎಂದು ಸಿಟ್ಟಿಗೆ ವ್ಯಕ್ತಿಯೊಬ್ಬ ಬರೋಬ್ಬರಿ 29 ನಾಯಿಗಳಿಗೆ ವಿಷವುಣಿಸಿ ಕೊಲೆ ಮಾಡಿದ್ದಾನೆ.

ಈ ಆಘಾತಕಾರಿ ಘಟನೆ ಮಹಾರಾಷ್ಟ್ರದ ಅಕೋಲಾ ನಗರದ ಪಕ್ಕದಲ್ಲಿರುವ ಗುಡ್ಡಿ ಪ್ರದೇಶದಲ್ಲಿ ನಡೆದಿದೆ. ತಾವು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಬೀದಿ ನಾಯಿಗಳು ನಮ್ಮನ್ನು ನೋಡಿ ಬೊಗಳುತ್ತವೆ, ರಾತ್ರಿ ನಾಯಿಗಳ ಸೌಂಡ್‌ಗೆ ನಿದ್ದೆ ಬರೋದಿಲ್ಲ ಎನ್ನುವ ಈ ಕ್ಷುಲ್ಲಕ ಕಾರಣಕ್ಕಾಗಿ, ಅಪರಿಚಿತ ವ್ಯಕ್ತಿಯೊಬ್ಬ ಈ ಮೂಕ ಪ್ರಾಣಿಗಳಿಗೆ ವಿಷ ನೀಡಿ ಕೊಂದಿದ್ದಾನೆ. ವಿಷಪೂರಿತ ಆಹಾರವನ್ನು ಸೇವಿಸಿದ 24 ಗಂಟೆಗಳಲ್ಲಿ 25 ಕ್ಕೂ ಹೆಚ್ಚು ನಾಯಿಗಳು ಸಾವನ್ನಪ್ಪಿವೆ, ಹಾಗೆಯೇ ಕೆಲವು ಇನ್ನೂ ಗಂಭೀರ ಸ್ಥಿತಿಯಲ್ಲಿವೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪ್ರದೇಶದ ನಿವಾಸಿಗಳು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಘಟನೆಯ ನಂತರ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದು, ಘಟನೆಯ ತನಿಖೆಗಾಗಿ ಸ್ಥಳೀಯರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಪೊಲೀಸರು ಪ್ರಸ್ತುತ ಈ ವಿಷಯವನ್ನು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!