ಮದುವೆಯಾಗೋಣ ಎಂದು ಹೇಳಿ ಅತ್ಯಾಚಾರ ಮಾಡಿದ್ದ ವ್ಯಕ್ತಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಮದುವೆಯ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ 28 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಯುವಕ ಮತ್ತು ಆತನ ಪೋಷಕರ ವಿರುದ್ಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಆರೋಪಿಯನ್ನು ಕೇರಳ ಮೂಲದ ಬಿಲಾಲ್ ರಫೀಕ್ ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಛತ್ತೀಸ್ ಗಢ ಮೂಲದ ಸಂತ್ರಸ್ತೆ ಹೆಬ್ಬಾಳದ ಖಾಸಗಿ ಆಸ್ಪತ್ರೆಯ ನರ್ಸಿಂಗ್ ಸಿಬ್ಬಂದಿಯಾಗಿದ್ದು, ರಫೀಕ್ ಅವರೊಂದಿಗೆ ನೇರ ಸಂಬಂಧ ಹೊಂದಿದ್ದರು. 2021 ರಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಪರಸ್ಪರ ಪರಿಚಿತರಾಗಿದ್ದು, ಬಳಿಕ ಫೋನ್‌ನಲ್ಲಿ ಚಾಟಿಂಗ್, ಮಾತುಕತೆ ಮೂಲಕ ಪ್ರೀತಿಸುತ್ತಿದ್ದರು. ಮದುವೆಯಾಗುವುದಾಗಿ ನಂಬಿಸಿದ ರಫೀಕ್ ಎರಡು ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ನಡೆಸಿದ್ದ ಎನ್ನಲಾಗಿದೆ.

ಎರಡೂ ಬಾರಿ ಆಕೆ ಗರ್ಭಿಣಿಯಾದಾಗ ಗರ್ಭಪಾತ ಮಾಡಿಸಿಕೊಳ್ಳುವಂತೆ ಆರೋಪಿ ಒತ್ತಾಯಿಸಿದ್ದಾನೆ. 2024 ರಲ್ಲಿ ಆಕೆ ಮೂರನೇ ಬಾರಿಗೆ ಗರ್ಭಿಣಿಯಾದಾಗ ಸಂತ್ರಸ್ತೆ ಆತನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದು, ಅವರ ಎರಡೂ ಕುಟುಂಬಗಳು ಒಪ್ಪಿಗೆ ನೀಡಿದ್ದಾರೆ. ಆದರೆ, ಆಕೆ ಕೆಳ ಸಮುದಾಯಕ್ಕೆ ಸೇರಿದವಳು ಎಂದು ಆರೋಪಿಸಿ ಆಕೆಯನ್ನು ಮದುವೆಯಾಗಲು ನಿರಾಕರಿಸಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!