ಕೆ.ಆರ್.ಮಾರ್ಕೆಟ್ ಫ್ಲೈಓವರ್ ನಿಂದ ಹಣ ಎಸೆದ ವ್ಯಕ್ತಿ ಪೊಲೀಸ್ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಫ್ಲೈಓವರ್​ (K.R. Market Flyover) ಮೇಲೆ ಬಂದು ಹಣ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಗಬಾವಿಯ ಯೂಟ್ಯೂಬ್​ ಚಾನಲ್ ಕಚೇರಿಯಲ್ಲಿ ಹಣ ಎಸೆದ ವ್ಯಕ್ತಿ ಇರುವುದನ್ನು ಖಚಿತಪಡಿಸಿ ಕಚೇರಿಗೆ ಎಂಟ್ರಿ ಕೊಟ್ಟು ವಶಕ್ಕೆ ಪಡೆದಿದ್ದಾರೆ.

ಸದ್ಯ ಹಣ ಎಸೆದ ವ್ಯಕ್ತಿ ಅರುಣ್ ಎಂದು ತಿಳಿದುಬಂದಿದ್ದು, ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಫ್ಲೈಓವರ್​ನಿಂದ ಹಣ ಎಸೆದ ಘಟನೆ ಸಂಬಂಧ ಕರ್ನಾಟಕ ಪೊಲೀಸ್ ಕಾಯ್ದೆ 92ಡಿ, ಐಪಿಸಿ 283ರ ಅಡಿ ಎನ್​ಸಿಆರ್ ಪ್ರಕರಣ ದಾಖಲಿಸಿದ ಕೆ.ಆರ್.ಮಾರ್ಕೆಟ್​ ಠಾಣಾ ಪೊಲೀಸರು, ಕಾರಣ ನೀಡುವಂತೆ ನಾಗರಭಾವಿಯಲ್ಲಿರುವ ಹಣ ಎಸೆದ ಅರುಣ್​ ನಿವಾಸಕ್ಕೆ ನೋಟಿಸ್ ಜಾರಿ ಕಳುಹಿಸಿದ್ದರು. ಅದಾಗ್ಯೂ ಉತ್ತರಿಸದಿದ್ದಾಗ ಅರುಣ್ ನಾಗರಭಾವಿಯಲ್ಲಿರುವ ಯೂಟ್ಯೂಬ್ ಕಚೇರಿಯಲ್ಲಿ ಇರುವುದು ಪೊಲೀಸರಿಗೆ ಖಚಿತವಾಗಿದೆ. ಅದರಂತೆ ಕಚೇರಿಗೆ ತೆರಳಿದ ಪೊಲೀಸರು ಅರುಣ್​ ಜೊತೆ ಮಾತುಕತೆ ನಡೆಸಿ ಠಾಣೆಗೆ ಕರೆದೊಯ್ದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!