ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಮೇಲೆ ನೀರು ಎರಚಿದ ವ್ಯಕ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಾದಯಾತ್ರೆ ವೇಳೆ ವ್ಯಕ್ತಿಯೊಬ್ಬರು ನೀರು ಎರಚಿದ ಘಟನೆ ನಡೆದಿದೆ.

ನೀರು ಎರಚಿದ ಕೂಡಲೇ ಭದ್ರತಾ ಸಿಬ್ಬಂದಿ ಮತ್ತು ಕೇಜ್ರಿವಾಲ್ ಅವರ ಬೆಂಬಲಿಗರು ಆ ವ್ಯಕ್ತಿಯನ್ನು ಹಿಡಿದು ಥಳಿಸಿದ್ದು, ಈ ವಿಡಿಯೋ ವೈರಲ್ ಆಗಿದೆ.

ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರ ನೆರೆಹೊರೆಯಲ್ಲಿ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ವ್ಯಕ್ತಿಯನ್ನು ಅಶೋಕ್ ಝಾ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪಿಸಿದ್ದಾರೆ. ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ. ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನನ್ನೂ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

https://x.com/ANI/status/1862835823563194751

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಜ್ರಿವಾಲ್ ತಮ್ಮ “ಹಳೆಯ ತಂತ್ರ” ಮಾಡಲು ಹಿಂತಿರುಗಿದ್ದಾರೆ ಎಂದು ದೆಹಲಿ ಬಿಜೆಪಿ ವಕ್ತಾರ ಪ್ರವೀಣ್ ಶಂಕರ್ ಕಪೂರ್ ಹೇಳಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!