ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿನ ಹಿಂಸಾಚಾರ ಕುರಿತು ರಾಜಕೀಯ ವಾದ-ವಿವಾದಗಳು ಹೆಚ್ಚಾಗುತ್ತಿದ್ದು, ಕೇಂದ್ರ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಳ್ಳುತ್ತಿದೆ.
ಇದೀಗ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಪಕ್ಷದ ಮುಖ್ಯವಾಣಿಯಾಗಿರುವ “ಸಾಮ್ನಾ” ಪ್ರತಿಕೆಯ ಸಂಪಾದಕಿಯದಲ್ಲಿ ಮಣಿಪುರ ಕಾಶ್ಮೀರಕ್ಕಿಂತ ಕೆಟ್ಟ ಪರಿಸ್ಥಿತಿಯಲ್ಲಿದೆ. “ದಿ ಮಣಿಪುರ ಫೈಲ್ಸ್ ” ಸಿನಿಮಾ ಮಾಡಬಹುದು ಎಂದು ವರದಿ ಮಾಡಿದೆ.
ಮಣಿಪುರ ಹಿಂಸಾಚಾರದ ಕುರಿತು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ವಿರುದ್ಧ ಉದ್ಧವ್ ಠಾಕ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಣಿಪುರ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯ ಕಾಶ್ಮೀರಕ್ಕಿಂತ ಕೆಟ್ಟದಾಗಿ ಎಂದು ಹೇಳಿದ್ದಾರೆ.
ಸಾಮ್ನಾ ಪ್ರತಿಕೆಯಲ್ಲಿ ಇತ್ತೀಚಿನ ದಿನಗಳಲ್ಲಿ, ‘ತಾಷ್ಕೆಂಟ್ ಫೈಲ್ಸ್’, ‘ದಿ ಕೇರಳ ಸ್ಟೋರಿ’ ಮತ್ತು ‘ದಿ ಕಾಶ್ಮೀರ್ ಫೈಲ್ಸ್’ ನಂತಹ ಚಲನಚಿತ್ರಗಳನ್ನು ನಿರ್ಮಿಸಲಾಗಿದೆ. ಇದರಂತೆ’ ದಿ ಮಣಿಪುರ ಫೈಲ್ಸ್’ ಮಾಡಬಹುದು ಎಂದು ತಿಳಿಸಿದ್ದಾರೆ.