ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಕಂದರಾಬಾದ್-ಅಗರ್ತಲಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಭೀತಿ ಸೃಷ್ಟಿಸಿದೆ.
ಒಡಿಶಾದ ಬೆರ್ಹಾಂಪುರ ನಿಲ್ದಾಣದಲ್ಲಿ ರೈಲು ನಿಂತಾಗ ಎಸಿ ಬಿ-5 ಕೋಚ್‌ನಿಂದ ಹೊಗೆ ಬರುತ್ತಿರುವುದನ್ನು ಪ್ರಯಾಣಿಕರು ಗಮನಿಸಿದ್ದು, ತಕ್ಷಣ ಪ್ರಯಾಣಿಕರನ್ನು ಇಳಿಸಲಾಯಿತು.
ರೈಲ್ವೇ ಅಧಿಕಾರಿಗಳು ಬೆಂಕಿ ಹೊತ್ತಿಕೊಂಡ ಬಗ್ಗೆ ಮಾಹಿತಿ ನೀಡಿದ ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. 45 ನಿಮಿಷಗಳ ನಂತರ ಬೆಂಕಿಯನ್ನು ಹತೋಟಿಗೆ ತರಲಾಯಿತು. ಬೆಂಕಿ ನಂದಿಸಿದ ನಂತರ ರೈಲು ನಿಲ್ದಾಣದಿಂದ ಹೊರಟಿತು.