ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಣದ ಇಬ್ಬರು ಬಿಜೆಪಿ ನಾಯಕರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಯತ್ನಾಳ್ ಜೊತೆ ಸೇರಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿದ್ದ ಇಬ್ಬರು ನಾಯಕರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿಯಾಗಿರುವುದು ವಿವಿಧ ರೀತಿ ಚರ್ಚೆಗೆ ಕಾರಣವಾಗಿದೆ.
ದಾವಣಗೆರೆ ಭಾಗದ ನಾಯಕರುಗಳಾದ ಮಾಜಿ ಕೇಂದ್ರ ಸಚಿವ ಜಿಎಂ ಸಿದ್ದೇಶ್ವರ್ ಹಾಗೂ ಬಿಪಿ ಹರೀಶ್ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಅವರುಗಳ ಮಧ್ಯೆ ಯಾವ ಮಾತುಕತೆ ನಡೆದಿದೆ ಎಂದು ಇನ್ನು ತಿಳಿದು ಬಂದಿಲ್ಲ.
ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ ಹಾಗೂ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರು ನನ್ನನ್ನು ಗೃಹಕಚೇರಿಯಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಇದು ಸೌಜನ್ಯದ ಭೇಟಿ ಎಂದು ಡಿಕೆ ಶಿವಕುಮಾರ್ ಅವರು ಫೋಟೋ ಹಂಚಿಕೊಂಡಿದ್ದಾರೆ.