ಬೆಂಗಳೂರಿನಲ್ಲಿ ಹೆಚ್ಚಾಯ್ತು ಬೀದಿ ಕಾಮಣ್ಣರ ಕಾಟ, ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕ ಅರೆಸ್ಟ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇವರಬೀಸನಹಳ್ಳಿಯ ಇಕೋ ವರ್ಲ್ಡ್ ಟೆಕ್ ಪಾರ್ಕ್‌ನ ಮುಖ್ಯ ದ್ವಾರದ ಬಳಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಾರತ್ತಹಳ್ಳಿ ಪೊಲೀಸರು ಖಾಸಗಿ ಕಂಪನಿಯ ಉದ್ಯೋಗಿಯನ್ನು ಅರೆಸ್ಟ್‌ ಮಾಡಲಾಗಿದೆ.

ಆರೋಪಿಯನ್ನು ದೇವರಬೀಸನಹಳ್ಳಿ ನಿವಾಸಿ ಶ್ರೀಕಾಂತ್ (32) ಎಂದು ಗುರುತಿಸಲಾಗಿದೆ, ಈತ ಎಂಬಿಎ ಪದವೀಧರನಾಗಿದ್ದು, ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ.

ಏಪ್ರಿಲ್ 30 ರಂದು ಭೋಗನಹಳ್ಳಿ ನಿವಾಸಿ 26 ವರ್ಷದ ಮಹಿಳೆಯೊಬ್ಬರು ಟೆಕ್ ಪಾರ್ಕ್‌ನ ಮುಖ್ಯ ದ್ವಾರದ ಬಳಿ ನಡೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿತ್ತು.

ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಶ್ರೀಕಾಂತ್ ಹಿಂದಿನಿಂದ ಬಂದು ಮಹಿಳೆಗೆ ಬೆನ್ನಿಗೆ ಕೆಳಗೆ ಹೊಡೆದಿದ್ದಾನೆ. ನಂತರ ಮುಂದೆ ಹೋಗಿ ಮತ್ತೆ ಯೂಟರ್ನ್ ತೆಗೆದುಕೊಂಡು ಮತ್ತೊಮ್ಮೆ ಮಹಿಳೆಗೆ ಕಿರುಕುಳ ನೀಡಿ, ಪರಾರಿಯಾಗಿದ್ದಾನೆ.

ಈ ವೇಳೆ ಸ್ಥಳೀಯರಾರೂ ನೆರವಿಗೆ ಬರಲಿಲ್ಲ ಎಂದು ದೂರಿನಲ್ಲಿ ಮಹಿಳೆ ಹೇಳಿದ್ದರು. ದೂರಿನ ಹಿನ್ನೆಲೆಯಲ್ಲಿ ಮಾರತಹಳ್ಳಿ ಪೊಲೀಸರು ಆರೋಪಿ ಬಂಧಿಸಲು ವಿಶೇಷ ತಂಡಗಳನ್ನು ರಚಿಸಿದ್ದರು. ಇದರಂತೆ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದ ಅಧಿಕಾರಿಗಳು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!