ಯಕ್ಷಗಾನದ ಪೋಷಾಕು ಧರಿಸಿ ಖುಷಿಪಟ್ಟ ಸಚಿವ ಡಾ. ಸುಧಾಕರ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಟ್ಕಳ ಶಾಸಕ ಸುನೀಲ್ ನಾಯ್ಕ ತಮ್ಮ ಜಾಲಿಯಲ್ಲಿರುವ ಮನೆಯಲ್ಲಿ ಭೀಷ್ಮ ವಿಜಯ ಯಕ್ಷಗಾನ ಪ್ರದರ್ಶನ ಏರ್ಪಡಿಸಿದ್ದರು. ಈ ವೇಳೆ ಸಚಿವ ಡಾ.ಕೆ.ಸುಧಾಕರ್ ಯಕ್ಷಗಾನ ವೀಕ್ಷಿಸಿ ಅದರ ವೇಷ ತೊಟ್ಟು ಜನರ ಗಮನ ಸೆಳೆದಿದ್ದಾರೆ.

ಜಾಲಿಗೆ ಭೇಟಿ ನೀಡಿದ ಡಾ.ಸುಧಾಕರ್ ರಾತ್ರಿಯಿಡೀ ಯಕ್ಷಗಾನ ವೀಕ್ಷಿಸಿದ್ದಾರೆ. ನಂತರ ಪೋಷಾಕು ತೊಟ್ಟು ಗಮನ ಸೆಳೆದಿದ್ದಾರೆ. ಸಚಿವರಿಗೆ ಕೋಟ ಶ್ರೀನಿವಾಸ ಪೂಜಾರಿ ಸೇರಿದಂತೆ ಮತ್ತಿತರರು ಸಾಥ್ ನೀಡಿದ್ದಾರೆ.

 

ಈ ಕುರಿತು ಸುಧಾಕರ್ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.’ಯಕ್ಷಗಾನ ನಮ್ಮ ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಹೆಗ್ಗುರುತು, ತುಳುನಾಡಿನ ಜನಜೀವನದ ಅವಿಭಾಜ್ಯ ಅಂಗ. ಕರಾವಳಿಗೆ ಭೇಟಿ ನೀಡಿದ ಮೇಲೆ ಯಕ್ಷಗಾನ ನೋಡದೆ ಹೋದರೆ ಆ ಪ್ರವಾಸ ಸಂಪೂರ್ಣವಾಗುವುದಿಲ್ಲ. ನೆನ್ನೆ ರಾತ್ರಿ ಭಟ್ಕಳ ಶಾಸಕ ಶ್ರೀ ಸುನಿಲ್ ನಾಯ್ಕ್ ಅವರ ಮನೆಯಲ್ಲಿ ಯಕ್ಷಗಾನ ವೀಕ್ಷಿಸಿ ದೈವಿಕಲೆಯ ವೇಷ ಹಾಕುವ ಅವಕಾಶ ದೊರೆತದ್ದು ನನ್ನ ಪುಣ್ಯ’ ಎಂದು ಬರೆದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!