ಹೊದಿಗಂತ ವರದಿ ವಿಜಯಪುರ:
ಮನೆಗೆ ನುಗ್ಗಿದ ದುಷ್ಕರ್ಮಿಗಳು ವಿವಾಹಿತ ಮಹಿಳೆಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಹಲಗುಣಕಿ ಗ್ರಾಮದಲ್ಲಿ ನಡೆದಿದೆ.
ಇಲ್ಲಿನ ಪಲ್ಲವಿ ವಠಾರ್ (21) ಹತ್ಯೆಯಾಗಿರುವ ಮಹಿಳೆ. ದುಷ್ಕರ್ಮಿಗಳು ಏಕಾಏಕಿ ಮನೆಗೆ ನುಗ್ಗಿ ಆಯುಧದಿಂದ ಮಹಿಳೆಯ ಹತ್ಯೆಗೈದು ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ