ನ್ಯೂಯಾರ್ಕ್‌ ನಲ್ಲಿ ಮಹಾತ್ಮಾ ಗಾಂಧಿ ಪ್ರತಿಮೆ ಒಡೆದು ಹಾಕಿದ ಕಿಡಿಗೇಡಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ನ್ಯೂಯಾರ್ಕ್‌ನ ದೇವಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಯ ಮೇಲೆ ಕಿಡಿಗೇಡಿಗಳು ದಾಳಿ ಮಾಡಿದ್ದು ಪ್ರತಿಮೆಯನ್ನು ಉರುಳಿಸಿ ಒಡೆದುಹಾಕಲಾಗಿದೆ. ಇದು ಈ ತಿಂಗಳಲ್ಲಿ ನಡೆದ ಎರಡನೇ ದಾಳಿಯಾಗಿದೆ. ಈ ಹಿಂದೆ ಆಗಸ್ಟ್‌ 3 ರಂದು ಇದೇ ರೀತಿಯ ಪ್ರಕರಣ ವರದಿಯಾಗಿತ್ತು.

ಆರು ಮಂದಿ ಶ್ರೀ ತುಳಸಿ ಮಂದಿರದಲ್ಲಿರುವ ಪ್ರತಿಮೆಯನ್ನು ಸುತ್ತಿಗೆಯಿಂದ ಧ್ವಂಸಗೊಳಿಸಿದ್ದಾರೆ. ಅದರ ಸುತ್ತಲೂ ಮತ್ತು ರಸ್ತೆಯ ಮೇಲೆ ದ್ವೇಷ ತುಂಬಿದ ಪದಗಳನ್ನು ಚಿತ್ರಿಸಿದ್ದಾರೆ ಎಂದು ಪೊಲೀಸರನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ತಿಳಿಸಿವೆ.

ಈ ಹಿಂದೆ ಆಗಸ್ಟ್ 3 ರಂದು ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು ಎಂದು ವರದಿಗಳು ತಿಳಿಸಿವೆ.

ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಶಂಕಿತ 25 ರಿಂದ 30 ವರ್ಷ ವಯಸ್ಸಿನ ಪುರುಷರ ಸಿಸಿಟಿವಿ ವಿಡಿಯೋವನ್ನು ಪೋಲೀಸರು ಬಿಡುಗಡೆ ಮಾಡಿದ್ದಾರೆ.
ಅವರು ಬಿಳಿ ಮರ್ಸಿಡಿಸ್ ಬೆಂಜ್ ಮತ್ತು ಗಾಢ ಬಣ್ಣದ ಕಾರಿನಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ನ್ಯೂಯಾರ್ಕ್ ಸ್ಟೇಟ್ ಅಸೆಂಬ್ಲಿ ಸದಸ್ಯೆ ಜೆನ್ನಿಫರ್ ರಾಜ್‌ಕುಮಾರ್ ಖಂಡಿಸಿದ್ದು “ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಬೇಕು ಮತ್ತು ಪೂರ್ಣ ಪ್ರಮಾಣದಲ್ಲಿ ಕಾನೂನು ಕ್ರಮ ಜರುಗಿಸಬೇಕು” ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!