ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಜೆಟ್ ಅಧಿವೇಶನ 2024 ಜುಲೈ 22 ರಿಂದ ಆಗಸ್ಟ್ 12 ರವರೆಗೆ ಪ್ರಾರಂಭವಾಗಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಘೋಷಿಸಿದ್ದಾರೆ. ಜುಲೈ 23 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡನೆಯಾಗಲಿದೆ.
ಮೋದಿ ಸಂಪುಟದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಬಜೆಟ್ 3.0 ಅನ್ನು ಮಂಡಿಸಲಿದ್ದಾರೆ. ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ದೇಶದ ಪ್ರಧಾನಿಯಾದ ನಂತರ ಮಂಡಿಸಲಾಗುತ್ತಿರುವ ಮೊದಲ ಬಜೆಟ್ ಇದಾಗಿದೆ.